ಬೈಕ್ ಗೆ ಡಿಕ್ಕಿ ಹೊಡೆದ ಪಿಕಪ್ ವಾಹನ: ಬೈಕ್ ಸವಾರನ ದಾರುಣ ಸಾವು
ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬೈಕಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಉಜ್ವಲ್ ಹೆಗ್ಡೆ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮನೆಯಿಂದ ಮೂಡಬಿದ್ರೆಯ ಕಾಲೇಜಿಗೆಂದು ಹೊರಟಿದ್ದ ಉಜ್ವಲ್ ಚಲಾಯಿಸುತ್ತಿದ್ದ ಬೈಕಿಗೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಡಿಕ್ಕಿಹೊಡೆದಿದೆ.
ಪಿಕಪ್ ಚಾಲಕ ಹರೀಶ್ ಪೂಜಾರಿ ಎಂಬವರು ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಹೊಡೆತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಉಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು.
ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw