ಅಕ್ಟೋಬರ್ 4ರಂದು ಕರಾವಳಿ ಉತ್ಸವ ಮೈದಾನದಲ್ಲಿ“ಪಿಲಿನಲಿಕೆ-7” ಕಾರ್ಯಕ್ರಮ: ಮಿಥುನ್ ರೈ - Mahanayaka

ಅಕ್ಟೋಬರ್ 4ರಂದು ಕರಾವಳಿ ಉತ್ಸವ ಮೈದಾನದಲ್ಲಿ“ಪಿಲಿನಲಿಕೆ-7” ಕಾರ್ಯಕ್ರಮ: ಮಿಥುನ್ ರೈ

mithun rai
03/10/2022

ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ, ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7” ಕಾರ್ಯಕ್ರಮವು ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ಅಕ್ಟೋಬರ್ 4 ಮಂಗಳವಾರ ನಡೆಯಲಿದೆ ಎಂದು  ಅಧ್ಯಕ್ಷರಾದ ಮಿಥುನ್ ತಿಳಿಸಿದ್ದಾರೆ.


Provided by

ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಅದ್ಭುತ ಕಲಾ ಪರಂಪರೆ ಮತ್ತು ಇಂದು ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುತ್ತಾ ಅದನ್ನು ಬೆಳೆಸುವ ನಿಟ್ಟಿನಲ್ಲಿ ಆರಂಭಿಸಿದ ಪಿಲಿನಲಿಕೆ ಸ್ಪರ್ಧೆ ಯಶಸ್ವಿಯಾಗಿ 6 ಆವೃತ್ತಿಗಳನ್ನು ಪೂರೈಸಿದೆ‌‌.

ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಿಂದ ಅದನ್ನು ಮುಂದುವರೆಸಲು ಅಸಾಧ್ಯವಾಗಿತ್ತು. ಇದೀಗ ಪಿಲಿನಲಿಕೆ-7 ಸ್ಪರ್ಧಾಕಣದಲ್ಲಿ ತುಳುನಾಡಿನ ಪ್ರತಿಷ್ಠಿತ ಮತ್ತು ಆಹ್ವಾನಿತ 12 ಭಾಗವಹಿಸಲಿದ್ದು ಬಹುಮಾನ ರೂಪದಲ್ಲಿ ಪ್ರಥಮ ರೂ.3,00,000/- ಮತ್ತು ಫಲಕ, ದ್ವಿತೀಯ ರೂ.2,00,000/- ಮತ್ತು ಫಲಕ, ತೃತೀಯ ರೂ.1,00,000/- ಮತ್ತು ಫಲಕ ಹಾಗೂ ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಮರಿಹುಲಿ, ಕರಿಹುಲಿ, ಮುಡಿ ಹಾರಿಸುವುದು, ತಾಸೆ, ಬಣ್ಣಗಾರಿಕೆ, ಅತ್ಯುತ್ತಮ ಹುಲಿ ಕುಣಿತಕ್ಕೆ ತಲಾ ರೂ. 50,000/- ನಗದು ಬಹುಮಾನಗಳನ್ನು ನೀಡಲಾಗುವುದು, ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ರೂ.50,000/- ವನ್ನು ಪ್ರೋತ್ಸಾಹಕ ರೂಪದಲ್ಲಿ ನೀಡಲಾಗುವುದು.


Provided by

ಈ ಬಾರಿಯ ಪಿಲಿನಲಿಕೆ-7ಕ್ಕೆ ಬಾಲಿವುಡ್‌ನ ಖ್ಯಾತ ತಾರೆಯರಾದ ಸುನಿಲ್ ಶೆಟ್ಟಿ, ಪೂಜಾ ಹೆಗ್ಡೆ ಹಾಗೂ ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸೇರಿದಂತೆ ಹಲವಾರು ನಟ ನಟಿಯರು, ತುಳು ರಂಗಭೂಮಿಯ ಹೆಸರಾಂತ ಕಲಾವಿದರು ತಾರಾ ಮೆರುಗನ್ನು ನೀಡಲಿದ್ದಾರೆ ಅಂದ್ರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ