ರಾಜಸ್ಥಾನ: ಮಿಗ್​-21 ಫೈಟರ್​ ಜೆಟ್​ ಪತನ; ಪೈಲಟ್​ ವಿಂಗ್​ ಕಮಾಂಡರ್ ಹುತಾತ್ಮ​ - Mahanayaka
3:22 AM Wednesday 11 - December 2024

ರಾಜಸ್ಥಾನ: ಮಿಗ್​-21 ಫೈಟರ್​ ಜೆಟ್​ ಪತನ; ಪೈಲಟ್​ ವಿಂಗ್​ ಕಮಾಂಡರ್ ಹುತಾತ್ಮ​

mig 21 crash
25/12/2021

ನವದೆಹಲಿ: ರಾಜಸ್ಥಾನದ ಜೈಸಲ್ಮೇರ್ ಬಳಿ ಭಾರತೀಯ ವಾಯುಸೇನೆಯ ಮಿಗ್​-21 ಫೈಟರ್​ ಜೆಟ್​ ಪತನಗೊಂಡ ಪರಿಣಾಮ ಪೈಲಟ್​ ವಿಂಗ್​ ಕಮಾಂಡರ್​ ಹರ್ಷಿತ್​ ಸಿನ್ಹಾ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಈ ಮಾಹಿತಿಯನ್ನು ವಾಯುಸೇನೆಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಖಚಿತಪಡಿಸಿದ್ದು, ಶುಕ್ರವಾರ ರಾತ್ರಿ 8.30 ರ ಸುಮಾರಿಗೆ ಮಿಗ್​-21 ಫೈಟರ್​ ಜೆಟ್ ತರಬೇತಿ ವಿಹಾರದ ಸಮಯದಲ್ಲಿ ಪಶ್ಚಿಮ ವಲಯದಲ್ಲಿ ಪತನಗೊಂಡಿದೆ. ಮತ್ತಷ್ಟು ಮಾಹಿತಿ ಬರಬೇಕಿದ್ದು, ತನಿಖೆ ಆದೇಶಿಸಲಾಗಿದೆ ಎಂದು ತಿಳಿಸಿದೆ.

ರಾಜಸ್ಥಾನದ ಸ್ಯಾಮ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ಡೆಸೆರ್ಟ್​ ನ್ಯಾಷನಲ್​ ಪಾರ್ಕ್​ ಏರಿಯಾದಲ್ಲಿ ಜೆಟ್​ ಪತನಗೊಂಡಿದೆ ಎಂದು ಜೈಸಲ್ಮೇರ್ ಪೊಲೀಸ್​ ವರಿಷ್ಠಾಧಿಕಾರಿ ಅಜಯ್​ ಸಿಂಗ್​ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದೇವೇಗೌಡ ಪ್ರಧಾನಿಯಾಗಲು ಕಾಂಗ್ರೆಸ್ ಕಾರಣ: ಡಿ.ಕೆ. ಶಿವಕುಮಾರ್

ಮೂಡುಬಿದಿರೆ: ಎಸ್​ ಕೆಎಫ್​ ಕಾರ್ಖಾನೆಯಿಂದ ತೊಂದರೆ: ಗ್ರಾಮಸ್ಥರಿಂದ ಅಹೋರಾತ್ರಿ ಪ್ರತಿಭಟನೆ

ಉತ್ತರಾಖಂಡ್: ಸಚಿವ ಹರಕ್ ಸಿಂಗ್, ಶಾಸಕರೊಬ್ಬರ ದಿಢೀರ್ ರಾಜೀನಾಮೆ

ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಸ್ನೇಹಿತನಿಂದಲೇ ಯುವಕನ ಕೊಲೆ: ಆರೋಪಿಯ ಬಂಧನ

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ: ಮೂವರ ಬಂಧನ​

ಇತ್ತೀಚಿನ ಸುದ್ದಿ