ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ಪಿಣರಾಯಿ ವಿಜಯನ್ ಗೆ ಆಹ್ವಾನ ಇಲ್ಲ!: ಎಲ್ ಡಿಎಫ್ ಆಕ್ರೋಶ
ಕಣ್ಣೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ನಂತರ ನಾಳೆ ಸಿಎಂ ಆಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯನವರ ಪ್ರಮಾಣ ವಚನಕ್ಕೆ ನೆರೆಯ ರಾಜ್ಯ ಕೇರಳದ ಸಿಎಂ ಪಿಣರಾಯಿ ವಿಜಯನ್ ಗೆ ಆಹ್ವಾನ ಇಲ್ಲದಿರುವುದಕ್ಕೆ ಆಡಳಿತರೂಢ ಎಲ್ ಡಿಎಫ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪ್ಯಾಸಿಸ್ಟ್ ಬಿಜೆಪಿ ವಿರುದ್ಧ ಜಾತ್ಯಾತೀತ ಪ್ರಜಾಸತಾತ್ಮಕ ಶಕ್ತಿಗಳನ್ನು ಒಗ್ಗೂಡಿಸುವ ಕೆಲಸ ಕಾಂಗ್ರೆಸ್ನಿಂದ ಸಾಧ್ಯವಿಲ್ಲ ಎನ್ನುವುದು ಕಾಂಗ್ರೆಸ್ನ ಈ ನಡೆಯಿಂದ ಗೊತ್ತಾಗಿದೆ. ಬಿಜೆಪಿ ವಿರುದ್ಧ ಈಗ ಕಾಂಗ್ರೆಸ್ ತೆಗೆದುಕೊಂಡಿರುವ ನಿರ್ಧಾರ ದೇಶದಾದ್ಯಂತ ಕೈಗೊಳ್ಳಲಿದೆ. ಇದು ಕಾಂಗ್ರೆಸ್ನ ಅಪಕ್ವ ಹಾಗೂ ನಿರ್ದೇಶನ ಇಲ್ಲದ ರಾಜಕೀಯ ನಡೆ ಎಂದು ಎಲ್ ಡಿಎಫ್ ನ ಕನ್ವೀನರ್ ಇ.ಪಿ.ಜಯರಾಜನ್ ಹೇಳಿದ್ದಾರೆ.
ರಾಷ್ಟ್ರಮಟ್ಟದಲ್ಲಿ ರಾಜಕೀಯ ಬೆಳವಣಿಗೆಗಳನ್ನು ಗ್ರಹಿಸಲು ಕಾಂಗ್ರೆಸ್ ವಿಫಲವಾಗಿದೆ ಎನ್ನುವುದರ ಸಂಕೇತ ಇದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂದ ಹಾಗೆ, ಶನಿವಾರ ಬೆಂಗಳೂರಿನಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ನೆರೆಯ ರಾಜ್ಯ ತಮಿಳುನಾಡು ಮುಖ್ಯಮಂತ್ರಿ ಸೇರಿದಂತೆ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw