ನೂತನ ಪಿಂಚಣಿ ಯೋಜನೆ ರದ್ಧತಿಗೆ ಆಗ್ರಹಿಸಿ ಪಾದಯಾತ್ರೆ– ಪ್ರತಿಭಟನೆ
ಉಡುಪಿ: ಕರ್ನಾಟಕ ರಾಜ್ಯ ಸರಕಾರಿ ಎನ್ಪಿಎಸ್ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವಂತೆ ಆಗ್ರಹಿಸಿ ಇಂದ್ರಾಳಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಹಾಗೂ ಪ್ರತಿಭಟನೆಯನ್ನು ಬುಧವಾರ ನಡೆಸ ಲಾಯಿತು.
ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಮಾತನಾಡಿ, ಸರಕಾರಿ ನೌಕರರು ದೇಶ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಸಂವಿಧಾನ ಬದ್ಧವಾಗಿ ಭದ್ರತೆ ನೀಡು ವುದು ಸರಕಾರದ ಕರ್ತವ್ಯವಾಗಿದೆ. ಈ ರೀತಿಯ ಭದ್ರತೆ ನೀಡದಿರುವುದು ಸಂವಿಧಾನ ವಿರೋಧಿ ನಿಲುವು ಆಗಿದೆ. ಕರ್ನಾಟಕದಲ್ಲಿಯೂ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿಗೊಳಿಸುವಂತೆ ನಿರಂತ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ಸ್ಥಳಕ್ಕೆ ಆಗಮಿಸಿದ ಉಡುಪಿ ಶಾಸಕ ಕೆ.ರಘುಪತಿ ಭಟ್ ಮನವಿ ಸ್ವೀಕರಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುವುದಾಗಿ ಭರವಸೆ ನೀಡಿದರು. ದಿ ಮೈಸೂರು ಇಲೆಕ್ಟ್ರೀಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಬೆಂಬಲ ವ್ಯಕ್ತಪಡಿಸಿದರು.
ಸಂಘದ ಜಿಲ್ಲಾಧ್ಯಕ್ಷ ರಾಘವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಸಿದ್ಧಪ್ಪ ಸಂಗಣ್ಣನವರ್, ಜಿಲ್ಲಾ ಸಂಚಾಲಕ ರವಿ ಪೂಜಾರಿ, ಸಂಘದ ಜಿಲ್ಲಾ ಗೌರವ ಸಲಹೆಗಾರ ಪ್ರಶಾಂತ್ ಶೆಟ್ಟಿ ಹಾವಂಜೆ, ಹೆಬ್ರಿ ತಾಲೂಕು ಅಧ್ಯಕ್ಷ ಹರೀಶ್ ಪೂಜಾರಿ, ಕುಂದಾಪುರ ತಾಲೂಕು ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಕಾರ್ಕಳ ತಾಲೂಕು ಅಧ್ಯಕ್ಷ ಸಂತೋಷ್ ಶೆಟ್ಟಿ, ಉಡುಪಿ ತಾಲೂಕು ಅಧ್ಯಕ್ಷ ರವಿ ಕುಮಾರ್, ಜಿಲ್ಲಾ ಉಪಾಧ್ಯಕ್ಷೆ ಸರಸ್ವತಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಬಿ.ಎಂ.ಫಯಾಝ್ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka