ಭಾರೀ ಮಳೆಗೆ ನಾಟಿ ಮಾಡಿದ್ದ ಜಮೀನು ಜಲಾವೃತ!
30/07/2024
ಚಿಕ್ಕಮಗಳೂರು: ಮಲೆನಾಡಿನಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ಎಸ್ಟೇಟ್ ನ ಕೆರೆ ಏರಿ ಹೊಡೆದು ಭಾರೀ ಪ್ರಮಾಣದ ನೀರು ಹೊರಕ್ಕೆ ಬಂದ ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ.
ಕೊಪ್ಪ ತಾಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾರು ಎರಡು ಎಕರೆ ವಿಸ್ತೀರ್ಣದ ಕೆರೆ ಏರಿ ಹೊಡೆದು ಭಾರೀ ನೀರು ಹೊರಕ್ಕೆ ಬಂದಿದೆ. ಇದರ ಪರಿಣಾಮ, ನಾಟಿ ಮಾಡಿದ್ದ ಜಮೀನು ಜಲಾವೃತಗೊಂಡಿದೆ.
ನಾಟಿ ಮಾಡಿದ್ದ ಭತ್ತದ ಜಮೀನು ಸಂಪೂರ್ಣ ಹಾನಿಯಾಗಿದ್ದು, ರೈತರಿಗೆ ತೀವ್ರ ನಷ್ಟ ಉಂಟಾಗಿದೆ. ತೀವ್ರ ಮಳೆಯಿಂದಾಗಿ ಮಲೆನಾಡಿನಲ್ಲಿ ನಿರಂತರ ಅವಾಂತರಗಳು ಸೃಷ್ಟಿಯಾಗುತ್ತಲೇ ಇವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: