‘ದಯವಿಟ್ಟು ವಾಪಸ್ ಆಗಿ’ : ನೇಪಾಳಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಕೆಐಐಟಿ ಸಂಸ್ಥಾಪಕ

ನೇಪಾಳದ ಎಂಜಿನಿಯರಿಂಗ್ ವಿದ್ಯಾರ್ಥಿಯ ಅಸಹಜ ಸಾವು ಮತ್ತು ನೆರೆಯ ದೇಶದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದ ಕೆಲವು ದಿನಗಳ ನಂತರ, ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥಾಪಕ ಅಚ್ಯುತ ಸಮಂತಾ ನೇಪಾಳಿ ವಿದ್ಯಾರ್ಥಿಗಳ ಪೋಷಕರಲ್ಲಿ ಕ್ಷಮೆಯಾಚಿಸಿದ್ದಾರೆ ಮತ್ತು ಕ್ಯಾಂಪಸ್ ಖಾಲಿ ಮಾಡಿದ ಎಲ್ಲರೂ ವಾಪಸ್ ಆಗುವಂತೆ ಒತ್ತಾಯಿಸಿದ್ದಾರೆ.
ಈ ಘಟನೆಯ ಬಗ್ಗೆ ಸಮಂತಾ ಅವರ ಮೊದಲ ಸಾರ್ವಜನಿಕ ಹೇಳಿಕೆಯ ವೀಡಿಯೊವನ್ನು ಕೆಐಐಟಿಯ ಎಕ್ಸ್ ಫ್ಲ್ಯಾಟ್ ಫಾರ್ಮ್‌ನಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿರುವ ಒಡಿಶಾ ಸರ್ಕಾರದ ಉನ್ನತ ಮಟ್ಟದ ಸಮಿತಿಯು ಶುಕ್ರವಾರ ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj