ಫ್ಲೆಕ್ಸ್‌ ಅಳವಡಿಸುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ಯುವಕ ಸಾವು

suresh
26/02/2022

ಕುಂದಾಪುರ: ಜಾತ್ರೆ ಪ್ರಯುಕ್ತ ಫ್ಲೆಕ್ಸ್‌ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ತಂತಿ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಕುಂದಾಪುರದ ಸೌಕೂರು ದೇವಸ್ಥಾನದ ಸಮೀಪ ನಡೆದಿದೆ.

ಸೌಕೂರು ನಿವಾಸಿಯಾಗಿರುವ ಮೋಹನ ದೇವಾಡಿಗ ಅವರ ಪುತ್ರ ಪ್ರಶಾಂತ ದೇವಾಡಿಗ (26) ಮೃತ ಯುವಕ. ಘಟನೆಯಲ್ಲಿ ಶ್ರೀಧರ ದೇವಾಡಿಗ (45) ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಜರುಗಲಿದ್ದು, ಆ ಪ್ರಯುಕ್ತ ಶುಕ್ರವಾರ ಜಾತ್ರೆಗೆ ಶುಭ ಕೋರುವ ಫ್ಲೆಕ್ಸ್‌ ಅಳವಡಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ

10ನೇ ಮಹಡಿಯ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ತರಬೇತಿ ವಿಮಾನ ಪತನ: ಮಹಿಳಾ ಪೈಲಟ್, ತರಬೇತಿ ನಿರತ ಪೈಲಟ್ ಸಾವು

ಬಿಜೆಪಿ ಜತೆ ಮೈತ್ರಿ ಇಲ್ಲ: ಬಿಎಸ್‌ ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ

ಮಾರಾಕಾಸ್ತ್ರ ತೋರಿಸಿ ದರೋಡೆಗೆ ಯತ್ನ: ಇಬ್ಬರು ಆರೋಪಿಗಳ ಸೆರೆ

 

ಇತ್ತೀಚಿನ ಸುದ್ದಿ

Exit mobile version