ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪುಸ್ತಕ, ಕಂಪಾಸ್ ಬಾಕ್ಸ್ ವಿತರಣೆ

ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಅಂಗವಾಗಿ ಇಂದು ಕಡಿಯಾಳಿ ಯು.ಕಮಲಾ ಬಾಯಿ ಪ್ರೌಢಶಾಲಾ ಮಕ್ಕಳಿಗೆ ಉಡುಪಿ ನಗರ ಬಿಜೆಪಿ ವತಿಯಿಂದ ನೀಡಲಾದ ಉಚಿತ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ನ್ನು ಶಾಸಕರಾದ ಕೆ. ರಘುಪತಿ ಭಟ್ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯರಾದ ಗೀತಾ ಶೇಟ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಕಾರ್ಯದರ್ಶಿಗಳಾದ ಆನಂದ್ ಮಠದಬೆಟ್ಟು, ಯು. ಕಮಲಾ ಬಾಯಿ ಪೌಢಶಾಲಾ ಮುಖ್ಯೋಪಾಧ್ಯಾಯರಾದ ಸುದರ್ಶನ್ ನಾಯಕ್ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka