ಲೋಕಸಭೆ ಚುನಾವಣೆ ಮೇಲೆ ಕಣ್ಣು: ತಮಿಳುನಾಡಿನಲ್ಲಿ ಸ್ಪರ್ಧೆ ಮಾಡ್ತಾರ ಪ್ರಧಾನಿ ಮೋದಿ..?
2024 ರ ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿಬಿಟ್ಟಿದೆ. ಇದರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಮುಂಚೂಣಿಗೆ ತರುವ ಉದ್ದೇಶದಿಂದ ಪ್ರಧಾನಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮೋದಿ ಅವರು ತಮಿಳುನಾಡಿನಿಂದಲೂ ಸ್ಪರ್ಧಿಸಿದರೆ ಆಶ್ಚರ್ಯವೇನಿಲ್ಲ. ತಮಿಳುನಾಡಿನ ಜೊತೆ ಅವರ ರಾಜಕೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೆಲವು ತಿಂಗಳ ಹಿಂದೆ ಅ ಕಾಶಿ-ತಮಿಳು ಸಂಗಮಮ್ ಕಾರ್ಯಕ್ರಮ ನಡೆಸಲಾಗಿತ್ತು.
ಈ ಕುರಿತು ನಾಂಪಲ್ಲಿಯ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲಾಗಿದ್ದು, 11 ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಉಪಸ್ಥಿತಿಯಲ್ಲಿ ಈ ಪ್ರಾದೇಶಿಕ ಸಮಾಲೋಚನಾ ಸಭೆ ನಡೆದಿದೆ.
ಈ ಸಭೆಯಲ್ಲಿ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿದ್ದು, ಅವರು ದಕ್ಷಿಣದಲ್ಲಿ ಪಕ್ಷವನ್ನು ಗಟ್ಟಿಯಾಗಿ ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಭಾರತದ ರಾಜ್ಯವೊಂದರಿಂದ ಮೋದಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಪ್ರತಿನಿಧಿಗಳ ಸಲಹೆ ಕೇಳಿದಾಗ ಹಲವರು ನರೇಂದ್ರ ಮೋದಿ ಅವರನ್ನು ರಾಮನಾಥಪುರದಿಂದ ಸ್ಪರ್ಧಿಸುವಂತೆ ಸೂಚಿಸಿದ್ದು, ಇಂಡಿಯನ್ ಮುಸ್ಲಿಂ ಲೀಗ್‌ನ ಕೆ ನವಾಸ್ಕಾನಿ ರಾಮನಾಥಪುರಂ ಕ್ಷೇತ್ರದ ಸಂಸದರಾಗಿದ್ದಾರೆ.
ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದ ಬಿಜೆಪಿ 50 ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂದು ಎಂದು ಜೆಪಿ ನಡ್ಡಾ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಆಡಳಿತ ವಿರೋಧಿ ಅಂಶದಿಂದಾಗಿ ಉತ್ತರದ ಕೆಲವು ರಾಜ್ಯಗಳಲ್ಲಿ ಪಕ್ಷದ ಸೋಲಿನ ಸಂಭವನೀಯತೆಯನ್ನು ಸಮತೋಲನಗೊಳಿಸುವ ಸಲುವಾಗಿಯೇ ಈ ಸವಾಲು ನೀಡಲಾಗಿದೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw