ಗಡ್ಡ ತೆಗೆಸಿಕೊಳ್ಳಿ ಎಂದು ಪತ್ರದೊಂದಿಗೆ ಪ್ರಧಾನಿಗೆ 100 ರೂ. ಕಳುಹಿಸಿದ ಟೀ ವ್ಯಾಪಾರಿ

pm modi
09/06/2021

ಮುಂಬೈ: ಕೊರೊನಾ, ಲಾಕ್ ಡೌನ್ ಸಂಕಷ್ಟದ ನಡುವೆಯೇ ಕೇಂದ್ರ ಸರ್ಕಾರದ ಕ್ರಮಗಳ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಇಲ್ಲೊಬ್ಬ ಟೀ ವ್ಯಾಪಾರಿ ಪ್ರಧಾನಿ ಮೋದಿಗೆ 100 ರೂಪಾಯಿ ಕಳುಹಿಸಿಕೊಟ್ಟಿದ್ದು, ಗಡ್ಡ ತೆಗೆಸಿಕೊಳ್ಳುವಂತೆ ಪತ್ರ ಬರೆದಿದ್ದಾರೆ.

ಟೀ ವ್ಯಾಪಾರಿ ಅನಿಲ್ ಮೋರೆ ಪ್ರಧಾನಿ ನರೇಂದ್ರ ಮೋದಿಗೆ 100 ರೂಪಾಯಿ ಕಳುಹಿಸಿದವರಾಗಿದ್ದಾರೆ. ಪ್ರಧಾನಿ ಗಡ್ಡ ಬೆಳೆಸಿದ್ದಾರೆ. ಆದರೆ ಏನನ್ನಾದರೂ ಬೆಳೆಸುವುದಾದರೆ ದೇಶದ ಜನತೆಗೆ ಉದ್ಯೋಗಾವಕಾಶಗಳನ್ನು ಬೆಳೆಸಿ, ಲಸಿಕೆಯನ್ನು ಹೆಚ್ಚಿಸಿ, ಈಗಿರುವ ವೈದ್ಯಕೀಯ ಸೌಲಭ್ಯಗಳನ್ನು ಏರಿಕೆ ಮಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ.

ಪ್ರಧಾನಿಗಳ ಹುದ್ದೆ ದೇಶದ ಅತ್ಯುನ್ನತ ಹುದ್ದೆಯಾಗಿದೆ. ಪ್ರಧಾನಿಗಳ ಬಗ್ಗೆ ಅವರ ಆಡಳಿತದ ಬಗ್ಗೆ ಗೌರವವಿದೆ. ನನ್ನ ಉಳಿತಾಯದ ಹಣದಿಂದ 100 ರೂಪಾಯಿಗಳನ್ನು ನಾನು ಅವರಿಗೆ ಗಡ್ಡ ತೆಗೆಸಿಕೊಳ್ಳುವುದಕ್ಕಾಗಿ ಕಳಿಸುತ್ತಿದ್ದೇನೆ. ಅವರು ಅತ್ಯುನ್ನತ ನಾಯಕ ಅವರಿಗೆ ಅವಮಾನ ಮಾಡುವುದು ನನ್ನ ಉದ್ದೇಶವಲ್ಲ. ದೇಶದ ಬಡ ಜನತೆ ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಅವರ ಗಮನ ಸೆಳೆಯುವುದಕ್ಕಾಗಿ ಈ ರೀತಿ ಮಾಡಿದ್ದೇನೆ ಎಂದು ಅನಿಲ್ ಮೋರೆ ಹೇಳಿದ್ದಾರೆ.

ಕೋವಿಡ್-19 ನಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡಿರುವವರಿಗೆ 5 ಲಕ್ಷ ರೂಪಾಯಿ ಹಾಗೂ ಲಾಕ್ ಡೌನ್ ನಿಂದ ಸಂಕಷ್ಟ ಎದುರಿಸುತ್ತಿರುವವರಿಗೆ 30,000 ರೂಪಾಯಿಗಳನ್ನು ನೀಡುವುದಕ್ಕೆ ಪ್ರಧಾನಿಗಳಿಗೆ ಪತ್ರದ ಮೂಲಕ ಒತ್ತಾಯಿಸಿದ್ದೇನೆ ಎಂದು ಅನಿಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

Exit mobile version