ಪ್ರಧಾನಿ ಮೋದಿ ಮುಸ್ಲಿಮರಿಗೆ ಮೀಸಲಾತಿ ನೀಡಿದರೆ ಸರಿ, ನಾವು ನೀಡಿದರೆ ತಪ್ಪೇ?: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಅನ್ನೋ ಕಾರಣಕ್ಕೆ ಕೊಟ್ಟಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂ ಧರ್ಮದವರಿಗೂ ಕೊಡಬೇಕಾಗುತ್ತೆ. ಮುಸ್ಲಿಂ ಮೀಸಲಾತಿ ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯದಲ್ಲೂ ಇದೆ. ಆದ್ರೆ ನಾವು ಕೇವಲ ಮುಸ್ಲಿಂರಿಗೆ ಮಾತ್ರ ಮೀಸಲಾತಿ ಕೊಟ್ಟಿಲ್ಲ ಎಂದರು.
ಮುಸ್ಲಿಂ ಸಮುದಾಯದ 70 ಜಾತಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೆಮ್ಮೆಯಿಂದ ಹೇಳಿದ್ದಾರೆ. ಮೋದಿಯವರು ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ? ಎಂದು ಅವರು ಇದೇ ವೇಳೆ ಪ್ರಶ್ನಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: