ಮೊದಲ ಬಾರಿಗೆ ಇಂತಹ ದೊಡ್ಡ ನೋವನ್ನು ಅನುಭವಿಸುತ್ತಿದ್ದೇನೆ: ಪ್ರಧಾನಿ ಮೋದಿ ಭಾವುಕ
ನರ್ಮದಾ: ನಾನು ಏಕ್ತಾ ನಗರದಲ್ಲಿದ್ದರೂ ನನ್ನ ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಸೇತುವೆ ದುರಂತದ ಕುರಿತು ಮಾತನಾಡಿದ್ದಾರೆ.
ಗುಜರಾತ್ ನ ಕೆವಾಡಿಯಾದಲ್ಲಿ ಸೋಮವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ಸಂತಾಪವನ್ನು ಸೂಚಿಸುತ್ತೇನೆ. ಈ ದುಃಖದ ಸಮಯದಲ್ಲಿ ಸರ್ಕಾರವು ಎಲ್ಲಾ ರೀತಿಯಲ್ಲೂ ದುಃಖಿತ ಕುಟುಂಬಗಳೊಂದಿಗೆ ಇದೆ ಎಂದು ಧೈರ್ಯ ಹೇಳಿದರು.
ಗುಜರಾತ್ ಸರ್ಕಾರ ನಿನ್ನೆಯಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಕೇಂದ್ರವು ರಾಜ್ಯ ಸರ್ಕಾರಕ್ಕೆ ಎಲ್ಲ ಸಹಾಯವನ್ನೂ ನೀಡುತ್ತಿದೆ. ನಾನೀಗ ಏಕ್ತಾ ನಗರದಲ್ಲಿ ಇದ್ದೇನೆ. ಆದರೆ, ನನ್ನ ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ ಎಂದರು.
ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಇಂತಹ ದೊಡ್ಡ ನೋವನ್ನು ಅನುಭವಿಸುತ್ತಿದ್ದೇನೆ. ಒಂದು ಕಡೆ ನೋವು, ಇನ್ನೊಂದು ಕಡೆ ಕರ್ತವ್ಯವಿದೆ. ಎರಡನ್ನು ನಿಭಾಯಿಸಬೇಕಿದೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka