ಪ್ರಧಾನಿ ಕಾರ್ಯಕ್ರಮಕ್ಕೆ ಆಗಮಿಸುವವರ ಗಮನಕ್ಕೆ: ಕಾರ್ಯಕ್ರಮದ ಸಮಯ ಬದಲಾವಣೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವ್ರು ಸೆಪ್ಟಂಬರ್ 2ರಂದು ಮಂಗಳೂರಿಗೆ ಭೇಟಿ ನೀಡುವ ಕಾರ್ಯಕ್ರಮದ ಸಮಯ ಬದಲಾವಣೆ ಆಗಿದೆ. ಮಧ್ಯಾಹ್ನ 1:15ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದ್ದಾರೆ.
ಮಂಗಳೂರಲ್ಲಿರೋ ಪಕ್ಷದ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ‘ಈ ಮೊದಲು ಪ್ರಧಾನಿ ಮೋದಿ ಕಾರ್ಯಕ್ರಮ ಸಂಜೆ 4 ಗಂಟೆಗೆ ನಿಗದಿಯಾಗಿತ್ತು. ಆದರೆ ಬದಲಾದ ಸಮಯದಂತೆ ಪ್ರಧಾನಿ ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿದ್ದಾರೆ. ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ನವ ಮಂಗಳೂರು ಬಂದರು ಪ್ರಾಧಿಕಾರ(ಎನ್.ಎಂ.ಪಿ.ಎ.)ಕ್ಕೆ ಭೇಟಿ ನೀಡುವರು. ಅಲ್ಲಿಂದ ರಸ್ತೆ ಮಾರ್ಗವಾಗಿ ಸಭಾ ಕಾರ್ಯಕ್ರಮ ನಡೆಯುವ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸುವರು ಎಂದರು.
ಕಾರ್ಯಕ್ರಮದ ಸಮಯ ಬದಲಾವಣೆ ಆಗಿರುವುದರಿಂದ ಜನರು ಪೂರ್ವಾಹ್ನ 11:30ರ ಒಳಗಾಗಿ ಸಭಾ ಮೈದಾನ ತಲುಪಬೇಕಿದೆ. ಜಿಲ್ಲಾಡಳಿತದಿಂದ ಉಪಾಹಾರ ವ್ಯವಸ್ಥೆ ಇರಲಿದೆ. ಕಾರ್ಯಕ್ರಮ ಮುಗಿದ ಮೇಲೆ ಪಕ್ಷದ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗುವುದು. ವಾಹನಗಳಿಗೆ ಊಟದ ಪ್ಯಾಕೆಟ್ ತಲುಪಿಸಲು ಯೋಚಿಸಲಾಗಿದೆ ಎಂದು ಅವರು ವಿವರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka