ಪ್ರಧಾನಿ ಮೋದಿ ಸ್ವಾಗತಕ್ಕೆ ಮಂಗಳೂರು ಸಜ್ಜು: ಆಕ್ಷೇಪಾರ್ಹ ವಸ್ತು, ತರುವಂತಿಲ್ಲ; ಅಪಪ್ರಚಾರದ ಬಗ್ಗೆ 2 ಕೇಸ್ ದಾಖಲು - Mahanayaka
1:18 AM Thursday 12 - December 2024

ಪ್ರಧಾನಿ ಮೋದಿ ಸ್ವಾಗತಕ್ಕೆ ಮಂಗಳೂರು ಸಜ್ಜು: ಆಕ್ಷೇಪಾರ್ಹ ವಸ್ತು, ತರುವಂತಿಲ್ಲ; ಅಪಪ್ರಚಾರದ ಬಗ್ಗೆ 2 ಕೇಸ್ ದಾಖಲು

pm modi in mangalore
31/08/2022

ಮಂಗಳೂರು: ಶುಕ್ರವಾರ ಪ್ರಧಾನಿ ಮೋದಿ ಭಾಗವಹಿಸುವ ಮಂಗಳೂರು ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಕಾರ್ಯಕ್ರಮದ ಯಶಸ್ಸಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಇಂದು ನಗರದಲ್ಲಿರೋ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡುತ್ತಾ, ಈ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.  ಕೆಲವು ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.

ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ನಿರ್ದೇಶನ ನೀಡಿಲ್ಲ. ಆದರೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದರು.

ಇನ್ನು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ತರುವಂತಿಲ್ಲ. ಕಮಿಷನರೇಟ್ ವ್ಯಾಪ್ತಿಯ 9 ಜಂಕ್ಷನ್‌ಗಳಲ್ಲಿ‌ ಸಂಚಾರ ಮಾರ್ಗ ಬದಲಿಸಲಾಗುತ್ತದೆ. 15 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಸಿಎಆರ್, ಕೆಎಸ್ಸಾರ್ಪಿ, ಹೋಮ್‌ ಗಾರ್ಡ್ ಸಹಿತ ವಿವಿಧ ಘಟಕಗಳ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಬಗ್ಗೆ 2 ಪ್ರಕರಣ ದಾಖಲಿಸಲಾಗಿದೆ  ಎಂದು ಇದೇ ವೇಳೆ ಅವರು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ