ಮುಂದಿನ ವರ್ಷದ ಗಣರಾಜ್ಯೋತ್ಸವಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅತಿಥಿ: ಮೋದಿ ಆಹ್ವಾನ ನೀಡಿದ್ದು ನಿಜನಾ..? - Mahanayaka
12:25 PM Saturday 21 - September 2024

ಮುಂದಿನ ವರ್ಷದ ಗಣರಾಜ್ಯೋತ್ಸವಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅತಿಥಿ: ಮೋದಿ ಆಹ್ವಾನ ನೀಡಿದ್ದು ನಿಜನಾ..?

20/09/2023

ಮುಂದಿನ ವರ್ಷದ ಗಣರಾಜ್ಯೋತ್ಸವಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿ ಎರಿಕ್‌ ಗಾರ್ಸೆಟಿ ಮಾಹಿತಿ ನೀಡಿದ್ದಾರೆ.

ಅನಂತಾ ಸೆಂಟರ್‌ ಆಯೋಜಿಸಿದ್ದ ಸಂವಾದದ ಸಂದರ್ಭದಲ್ಲಿ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ವೇಳೆ ಭಾರತ ಹಾಗೂ ಅಮೆರಿಕದ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಮೋದಿ ಅವರು 2024 ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಬರಲು ಬೈಡನ್‌ಗೆ ಆಹ್ವಾನ ನೀಡಿದ್ದಾರೆ ಎಂದು ತಿಳಿಸಿದರು.

ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೂ ಮುನ್ನ ಪ್ರಧಾನಿ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಬೈಡೆನ್ ಸೆಪ್ಟೆಂಬರ್ 8ರಂದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಭಾರತದ ರಾಜತಾಂತ್ರಿಕ ಮತ್ತು ಆರ್ಥಿಕ ಹಿತಾಸಕ್ತಿ, ಎರಡು ರಾಷ್ಟ್ರದ ಸಂಬಂಧಗಳನ್ನು ಗಮನದಲ್ಲಿಟ್ಟುಕೊಂಡು ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಬೈಡನ್‌ ಅವರನ್ನು ಆಹ್ವಾನಿಸಿದೆ ಎಂದು ಮೂಲಗಳು ತಿಳಿಸಿದೆ.


Provided by

2023ರ ಗಣರಾಜ್ಯೋತ್ಸವ ಸಮಾರಂಭದಲ್ಲಿ ಈಜಿಪ್ಟ್‌ನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಮುಖ್ಯ ಅತಿಥಿಯಾಗಿದ್ದರು. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ (2015), ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (2007), ಫ್ರೆಂಚ್ ಮಾಜಿ ಅಧ್ಯಕ್ಷರಾದ ನಿಕೋಲಸ್ ಸರ್ಕೋಜಿ (2008) ಮತ್ತು ಫ್ರಾಂಕೋಯಿಸ್ ಹೊಲಾಂಡ್ (2016) ಅವರು ಈ ಹಿಂದೆ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇದೀಗ ಜೋ ಬೈಡನ್ ಸರದಿಯಾಗಿದೆ.

ಇತ್ತೀಚಿನ ಸುದ್ದಿ