ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ವ್ಯಕ್ತಿ ನಾಲ್ಕು ದಿನಗಳ ಬಳಿಕ ಪತ್ತೆ! - Mahanayaka
2:57 PM Wednesday 11 - December 2024

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ವ್ಯಕ್ತಿ ನಾಲ್ಕು ದಿನಗಳ ಬಳಿಕ ಪತ್ತೆ!

aivarnadu
05/09/2022

ದಕ್ಷಿಣ ಕನ್ನಡ ಜಿಲ್ಲೆಯ  ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮಕ್ಕೆ ತೆರಳಿ ನಾಪತ್ತೆಯಾಗಿದ್ರು. ಇದೀಗ ನಾಲ್ಕು ದಿನದ ಬಳಿಕ ಪತ್ತೆಯಾಗಿದ್ದಾರೆ.

ಐವರ್ನಾಡು ಗ್ರಾಮದ ಸದಾಶಿವ ಪಾಲೆಪ್ಪಾಡಿ ಎಂಬವರು ಸೆಪ್ಟೆಂಬರ್ 2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹೋದವರು ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದರು. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಇಂದು ಬೆಳ್ಳಾರೆಯಲ್ಲಿ ಪತ್ತೆಯಾಗಿದ್ದು ಠಾಣೆಗೆ ಹಾಜರಾಗಿ ಬಳಿಕ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ ಕಲ್ಲಗದ್ದೆ ,ಸಿಬ್ಬಂದಿಗಾಳಾದ ಕುಮಾರ ಕಟ್ಟತ್ತಾರು ,ಪ್ರಜ್ವಲ್ ರವರೊಂದಿಗೆ ಮನೆಗೆ ತೆರಳಿದ್ದಾರೆ.

ಮಂಗಳೂರಿನಿಂದ ತನ್ನ ಸ್ನೇಹಿತನ ಮನೆಗೆ ಹೋಗಿರುವುದಾಗಿ ತಿಳಿಸಿದ್ದಾರೆನ್ನಲಾಗಿದೆ. ಈ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ