ಶೇಖ್ ಹಸೀನಾ ಪದಚ್ಯುತಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ– ಮುಹಮ್ಮದ್ ಯೂನೆಸ್ ಭೇಟಿ

04/04/2025
ಬ್ಯಾಂಕಾಕ್: ಭಾರತ ಹಾಗೂ ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿರುವ ನಡುವೆಯೇ ಪ್ರಧಾನಿ ಮೋದಿ ಹಾಗೂ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನೆಸ್ ಅವರು ಥೈಲ್ಯಾಂಡ್ ನಲ್ಲಿ ಭೇಟಿಯಾಗಿ ಸಭೆ ನಡೆಸಿದರು.
ಆಗಸ್ಟ್ ನಲ್ಲಿ ಶೇಖ್ ಹಸೀನಾ ಆಡಳಿತವನ್ನು ಪದಚ್ಯುತಗೊಳಿಸಿದ ನಂತರ ಇದು ಮೊದಲ ಸಭೆಯಾಗಿದೆ. ಬಿಮ್ ಸ್ಟೆಕ್ ಶೃಂಗಸಭೆಯ ಹೊರತಾಗಿ ಬಾಂಗ್ಲಾದೇಶವು ಯೂನಸ್ ಮತ್ತು ಪ್ರಧಾನಿ ಮೋದಿ ನಡುವೆ ಭೇಟಿಯನ್ನು ಬಯಸಿದೆ ಎಂದು ಮೂಲಗಳು ತಿಳಿಸಿವೆ.
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಉಭಯ ನಾಯಕರು ಪರಸ್ಪರ ಹಸ್ತಲಾಘವ ಮಾಡಿದರು. ಗುರುವಾರ ರಾತ್ರಿ ಬಿಮ್ ಸ್ಪೆಕ್ ನಾಯಕರ ಭೋಜನಕೂಟದಲ್ಲಿ ಮೋದಿ ಮತ್ತು ಯೂನಸ್ ಪರಸ್ಪರ ಪಕ್ಕದಲ್ಲಿ ಕುಳಿತಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: