ಸರ್ಕಾರದ ಯೋಜನೆ ಮನೆ ಮನೆಗೆ ತಲುಪಿಸಲು ಮೋದಿ ಹೇಳಿದ್ದಾರೆ: ನಳಿನ್ ಕುಮಾರ್ ಕಟೀಲ್

nalin kumar kateel photos
04/09/2022

ಮಂಗಳೂರು: ಮಂಗಳೂರಿನ ‌ಕೋರ್ ಕಮಿಟಿ ಸಭೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿಯವರು ಕೋರ್ ಕಮಿಟಿ ಸದಸ್ಯರ ಜೊತೆ ಪರಿಚಯಾತ್ಮಕವಾಗಿ ಮಾತನಾಡಿದ್ದಾರೆ. ಎಲ್ಲರನ್ನೂ ‌ಪರಿಚಯ ಮಾಡಿ ಕೆಲ ಹೊತ್ತು ಮಾತನಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ಮನೆ ಮನೆಗೆ ತಲುಪಿಸಲು ಹೇಳಿದ್ದಾರೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ಬಗ್ಗೆ ಜಾಗೃತಿ ಮೂಡಿಸಲು ಹೇಳಿದ್ದಾರೆ. ಪ್ರತಿಯೊಬ್ಬ ಫಲಾನುಭವಿಗೆ ಸಿಗಬೇಕು ಮತ್ತು ಜಾಗೃತಿಯಾಗಬೇಕು. ಸರ್ಕಾರದ ಅಂಕಿಅಂಶ ಆಗಿರದೇ ನಿಜವಾದ ಫಲಾನುಭವಿಗಳಿಗೆ ತಲುಪಲು ಯತ್ನಿಸಿ ಅಂದಿದ್ದಾರೆ.

ಒಟ್ಟಾರೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ. ಚುನಾವಣಾ ತಯಾರಿ ಈಗಾಗಲೇ ಮಾಡಿದ್ದೇವೆ. 8ರಂದು ಜನೋತ್ಸವ ಇದೆ. ಅಲ್ಲದೇ ರಾಜ್ಯದ ಏಳು ಕಡೆ ದೊಡ್ಡ ಸಮಾವೇಶ ಮಾಡ್ತಾ ಇದ್ದೀವಿ. ಯಾವುದೇ ಬದಲಾವಣೆ ಬಗ್ಗೆ ಚರ್ಚೆ ಇಲ್ಲ, ಪರಿಚಯಾತ್ಮಕ ಸಭೆ ಅಷ್ಟೇ ಅಂದ್ರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version