ಮುಖ್ಯಮಂತ್ರಿಗಳ ಟ್ವೀಟ್ ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ಹಾಗೂ ಮೈಸೂರು — ಬೆಂಗಳೂರು ದಶಪಥ ರಸ್ತೆಯ ವೀಡಿಯೊಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
“ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ’ ಎಂದಿರುವ ಸಿಎಂ ಅವರ ಟ್ವೀಟ್ ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡುತ್ತಾ, ‘ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ” ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw