ಮತ್ತೆ ಪ್ರವಾಸ: ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಐದು ದಿನಗಳ ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ಪ್ರವಾಸಕ್ಕೆ ಶನಿವಾರ ತೆರಳಿದ್ದಾರೆ. ಅವರು ನವೆಂಬರ್ 16 ರಿಂದ 21 ರವರೆಗೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿದ್ದು, ಅಲ್ಲಿ ಅವರು ಬ್ರೆಜಿಲ್‌ನಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವತ್ತ ಗಮನ ಹರಿಸಿ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು ಅವರ ಆಹ್ವಾನದ ಮೇರೆಗೆ ಮೊದಲು ನೈಜೀರಿಯಾಕ್ಕೆ ಭೇಟಿ ನೀಡುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಭೇಟಿಯ ವೇಳೆ ನೈಜೀರಿಯಾದಲ್ಲಿರುವ ಭಾರತೀಯ ಸಮುದಾಯವನ್ನು ಭೇಟಿ ಮಾಡಲಿದ್ದಾರೆ. ಅವರು ನವೆಂಬರ್ ೧೬ ರಿಂದ ೧೭ ರವರೆಗೆ ಆಫ್ರಿಕನ್ ರಾಷ್ಟ್ರದಲ್ಲಿ ಇರಲಿದ್ದಾರೆ.
“ಗೌರವಾನ್ವಿತ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು ಅವರ ಆಹ್ವಾನದ ಮೇರೆಗೆ, ಪಶ್ಚಿಮ ಆಫ್ರಿಕಾ ಪ್ರದೇಶದಲ್ಲಿ ನಮ್ಮ ನಿಕಟ ಪಾಲುದಾರರಾಗಿರುವ ನೈಜೀರಿಯಾಕ್ಕೆ ಇದು ನನ್ನ ಮೊದಲ ಭೇಟಿಯಾಗಿದೆ. ನನ್ನ ಭೇಟಿಯು ಪ್ರಜಾಪ್ರಭುತ್ವ ಮತ್ತು ಬಹುತ್ವದಲ್ಲಿ ಹಂಚಿಕೆಯ ನಂಬಿಕೆಯನ್ನು ಆಧರಿಸಿದ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ನಿರ್ಮಿಸಲು ಒಂದು ಅವಕಾಶವಾಗಿದೆ. ಹಿಂದಿಯಲ್ಲಿ ನನಗೆ ಆತ್ಮೀಯ ಸ್ವಾಗತ ಸಂದೇಶಗಳನ್ನು ಕಳುಹಿಸಿದ ಭಾರತೀಯ ಸಮುದಾಯ ಮತ್ತು ನೈಜೀರಿಯಾದ ಸ್ನೇಹಿತರನ್ನು ಭೇಟಿಯಾಗಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ” ಎಂದು ಮೋದಿಯವ್ರ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj