ಸದ್ದಿಲ್ಲದೇ ಜೀವ ಪಡೆಯುತ್ತಿದೆ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ!
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಅಂತ ಬಿಜೆಪಿ—ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ರಾಜ್ಯ ಸರ್ಕಾರ ಬಿ.ಎಸ್.ಯಡಿಯೂರಪ್ಪ(B.S.Yeddyurappa)ನವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸದ್ದಿಲ್ಲದೇ ಜೀವ ನೀಡಲು ಮುಂದಾಗಿದೆ.
ವರದಿಗಳ ಪ್ರಕಾರ, ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ ತೀವ್ರಗೊಳಿಸಿದೆ. ಯಡಿಯೂರಪ್ಪ ಬಂಧನಕ್ಕೆ ಇರುವ ಹೈಕೋರ್ಟ್ ತಡೆಯಾಜ್ಞೆಯ ತೆರವಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ಬಿಎಸ್‌ವೈ ಬಂಧನಕ್ಕೆ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಕಾನೂನು ಹೋರಾಟ ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಎಚ್ಚರಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಹಲವಾರು ಆರೋಪಗಳನ್ನು ಮಾಡುತ್ತಿರುವ ವಿಪಕ್ಷಗಳ ನಾಯಕರ ಮೇಲೆ ಇನ್ನು ಮುಂದೆ ಕರುಣೆ ತೋರಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಬಿ.ಎಸ್.ಯಡಿಯೂರಪ್ಪ ಮಾತ್ರವಲ್ಲದೇ ಬಿಜೆಪಿಯ ಹಲವು ನಾಯಕರ ಹಗರಣಗಳು ತನಿಖೆಗೆ ಬರಲಿದೆ. ಜೆಡಿಎಸ್ ನಾಯಕರಿಗೂ ಬಿಸಿಮುಟ್ಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: