ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ
ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರಿಂದು ಅಧಿಕಾರ ವಹಿಸಿಕೊಂಡರು. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದರು.
1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್ ರೆಡ್ಡಿ, ಬೆಂಗಳೂರು ನಗರದ 35ನೇ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಹೆಚ್ಚುವರಿ ಪೊಲೀಸ್ ಆಯುಕ್ತರು, ನಗರದ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.
ಬೆಂಗಳೂರಿನ ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ ವೇರ್ ಆ್ಯಂಡ್ ಸರ್ವೀಸಸ್ ಕಂಪನೀಸ್ (ಸೈಬರ್ ಸೆಕ್ಯೂರಿಟಿ ವಿಂಗ್) ಸಲಹೆಗಾರರಾಗಿ ಪ್ರತಾಪ್ರೆಡ್ಡಿ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದರು. ಕೆಲ ಕಾಲ ಸೈಬರ್ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು. ತಾಂತ್ರಿಕ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್ ಅಧಿಕಾರಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ವಿಜಯಪುರ, ಕಲಬುರಗಿಯಲ್ಲಿ ಎಸ್ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕ್ವಾರಿ ದುರಂತ: ಬಂಡೆ ಉರುಳಿ ಬಿದ್ದು 3 ಮಂದಿ ಸಾವು, ಹಿಟಾಚಿಯೊಳಗೆ ಸಿಲುಕಿರುವ ಚಾಲಕ
ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿದ ಪೊಲೀಸರು
ಜ್ಞಾನವಾಪಿ ಮಸೀದಿಯೊಳಗೆ 12 ಅಡಿ ಶಿವಲಿಂಗ ಹಾಗೂ ನಂದಿ ಪತ್ತೆ: ನಾಳೆ ಕೋರ್ಟ್ ಗೆ ವರದಿ