ಪೊಲೀಸರ ಬದಲು ಬಿಜೆಪಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ  | ಅನೈತಿಕ ಪೊಲೀಸ್ ಗಿರಿ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ - Mahanayaka
6:27 AM Thursday 11 - September 2025

ಪೊಲೀಸರ ಬದಲು ಬಿಜೆಪಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ  | ಅನೈತಿಕ ಪೊಲೀಸ್ ಗಿರಿ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

d k shivakumar
05/10/2021

ಸುಳ್ಯ:  ಬಿಜೆಪಿ ಸರ್ಕಾರದ್ದು ಅತಿಯಾಗುತ್ತಿದೆ. ರಾಜ್ಯದಲ್ಲಿ ಕಾನೂನು ಹೋಗಿದೆ. ಪೊಲೀಸರು ಕೆಲಸ ಮಾಡುತ್ತಿಲ್ಲ, ಪೊಲೀಸರ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು.


Provided by

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯಕ್ಕೆ ಪ್ರಕರಣವೊಂದರ ಸಂಬಂಧ ಸಾಕ್ಷಿ ಹೇಳಲು ಆಗಮಿಸಿದ್ದ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ರಾಜ್ಯದಲ್ಲಿ ನಡೆಯುತ್ತಿರುವ ಕಾನೂನು ಅವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಇತ್ತೀಚೆಗೆ ಟಿವಿ ಡಿಬೇಟ್‌ ನಲ್ಲಿ ಭಾಗವಹಿಸಿದ ಕಾಂಗ್ರೆಸ್‌ ನ ಮಹಿಳಾ ಕಾರ್ಯಕರ್ತೆಗೆ ಓರ್ವ ಬಹಿರಂಗವಾಗಿಯೇ ಹೊಡೆಯೋದಾಗಿ ಹೇಳಿದ್ದ. ಇದು ರಾಜ್ಯದ ಸದ್ಯದ ಸ್ಥಿತಿಯನ್ನು ತೋರಿಸುತ್ತಿದೆ ಎಂದು ಅವರು ಕರಾವಳಿಯಲ್ಲಿ ಧರ್ಮದ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ವಿರುದ್ಧ ಕಿಡಿಕಾರಿದರು.

ದೇಶದಲ್ಲಿ ಕಾನೂನೇ ಇಲ್ಲ. ಪ್ರತಿಭಟನೆ, ಹೋರಾಟ ಮಾಡುವುದು ಅವರವರ ಹಕ್ಕು. ಗಾಂಧೀಜಿ ಅಹಿಂಸೆಯ ಮೂಲಕ ಹೋರಾಟ ಮಾಡಿ ಅಂತಾ ಹೇಳಿದ್ದಾರೆ. ಹನ್ನೊಂದು ತಿಂಗಳಿಂದ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಕೇಂದ್ರ ಸಚಿವರ ಮಗ, ಉಪಮುಖ್ಯಮಂತ್ರಿ ಮಗ ಪ್ರತಿಭಟನಾಕಾರರನ್ನು ಕೊಲೆ ಮಾಡಿದ್ದಾರೆ. ಈ ಘಟನೆಯಲ್ಲಿ 4 ಜನ ಸತ್ತಿದ್ದಾರೆ. ಹೋರಾಟ ಮಾಡುತ್ತಿದ್ದವರನ್ನು ಗಾಡಿ ಹತ್ತಿಸಿ ಕೊಂದಿದ್ದಾರೆ. ಇವತ್ತಿಗೂ ಅವರನ್ನು ಅರೆಸ್ಟ್ ಮಾಡಿಲ್ಲ, ಮಂತ್ರಿಯ ರಾಜೀನಾಮೆಯನ್ನು ಸರ್ಕಾರ ಪಡೆದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

75 ಯುವತಿಯರನ್ನು ಮದುವೆಯಾಗಿ, 200 ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡಿದ ಪಾಪಿ ಅರೆಸ್ಟ್!

ಆನಂದ್ ಸಿಂಗ್, ಕಂಪ್ಲಿ ಗಣೇಶ್ ಎಣ್ಣೆ ಏಟು:  ಕೊನೆಗೂ ಪ್ರಕರಣ ರಾಜಿಯಲ್ಲಿ ಇತ್ಯರ್ಥ

ರೈಲಿನಲ್ಲಿ ಅಪ್ರಾಪ್ತೆಗೆ ಮೇಲೆ ಲೈಂಗಿಕ ಕಿರುಕುಳ ನಡೆಸಿದವನಿಗೆ 5 ವರ್ಷ ಜೈಲು ಶಿಕ್ಷೆ

ಆರ್ಯನ್ ಖಾನ್ ಜೊತೆಗೆ ರೇವ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಮಾಡೆಲ್ ಯಾರು ಗೊತ್ತಾ?

ಕಾಂಗ್ರೆಸ್ ಗೆ ಭವಿಷ್ಯವಿಲ್ಲ, ರಾಷ್ಟ್ರಮಟ್ಟದಲ್ಲಿ ಒಡೆದು ಚೂರಾಗುತ್ತಿದೆ | ಸಚಿವ ಅಶ್ವಥ್ ನಾರಾಯಣ್

ಉತ್ತರ ಪ್ರದೇಶದಲ್ಲಿ ರಾಮ ರಾಜ್ಯವಿಲ್ಲ, ಕೊಲೆಗಡುಕ ಸರ್ಕಾರವಿದೆ: ಮಮತಾ ಬ್ಯಾನರ್ಜಿ ಕಿಡಿ

ಈ ಬಾರಿಯೂ ಸಿಗಲಿಲ್ಲ ಬಿಜೆಪಿ ಟಿಕೆಟ್: ಮಹತ್ವದ ತೀರ್ಮಾನ ಕೈಗೊಂಡ ಪ್ರಮೋದ್ ಮುತಾಲಿಕ್

ಇತ್ತೀಚಿನ ಸುದ್ದಿ