ಗಮನಿಸಿ: ಪೊಲೀಸ್ ಇಲಾಖೆಯಲ್ಲಿ 16 ಸಾವಿರ ಸಿಬ್ಬಂದಿ ನೇಮಕಕ್ಕೆ ಶೀಘ್ರವೇ ಅರ್ಜಿ ಆಹ್ವಾನ
30/11/2020
ಗದಗ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 16 ಸಾವಿರ ಸಿಬ್ಬಂದಿಯ ನೇಮಕಾತಿಗೆ ಸರ್ಕಾರ ಶೀಘ್ರವೇ ಅರ್ಜಿ ಕರೆಯಲಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, 16 ಸಾವಿರ ಸಿಬಂದಿಯ ನೇಮಕಾತಿಗೆ ಸಂಬಂಧಪಟ್ಟಂತೆ ಈಗಾಗಲೇ ಅರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿದ್ದು, ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಎರಡು ವರ್ಷಗಳಲ್ಲಿ ಹಂತ ಹಂತವಾಗಿ ಸಿಬ್ಬಂದಿಯ ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಲಾಕ್ ಡೌನ್, ಕೊರೊನಾ ಸಂಕಷ್ಟದಿಂದ ಉದ್ಯೋಗ ಕಳೆದುಕೊಂಡವರು ಸದ್ಯ ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಗೃಹ ಇಲಾಖೆಯು ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಿದೆ ಎಂಬ ಸುದ್ದಿಯನ್ನು ನೀಡಿದ್ದಾರೆ.