ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಹಿರಿಯ ನಟ ಜಗ್ಗೇಶ್
ಮೈಸೂರು: ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸರಿಗೆ ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ 1 ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ಘೋಷಿಸಿದ್ದಾರೆ. ಈ ಸಂಬಂಧ ಶನಿವಾರ ಸಂಜೆ ಅವರು ಟ್ವೀಟ್ ಮಾಡುವ ಮೂಲಕ ಬಹುಮಾನವನ್ನು ಘೋಷಿಸಿದರು.
ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಕಾಮಪಿಪಾಸುಗಳನ್ನು ಬಂಧಿಸಿದ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ಅಭಿನಂದನೆಗಳು. ನಮ್ಮ ರಾಜ್ಯದ ಪೊಲೀಸರ ಬಗ್ಗೆ ನನಗೆ ಹೆಮ್ಮೆ ಇದೆ. ನನ್ನ ಕಡೆಯಿಂದ ಪ್ರಕರಣವನ್ನು ಭೇದಿಸಿರುವ ಪೊಲೀಸರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡಲಿದ್ದೇನೆ ಎಂದು ಅವರು ಘೋಷಿಸಿದ್ದಾರೆ.
ಇನ್ನೂ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಗದಿದ್ದರೂ, ತಮಗೆ ದೊರೆತ ಸಣ್ಣ ಸಣ್ಣ ಸುಳಿವುಗಳನ್ನೇ ಬೆನ್ನಟ್ಟಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ಬಂಧನಕ್ಕೆ ಪೊಲೀಸರಿಗೆ ಸಹಕಾರವಾದ ಅಂಶಗಳೇನು?
ದೇವಸ್ಥಾನದ ಆವರಣದಲ್ಲಿ ಟಿಕ್ ಟಾಕ್ ವಿಡಿಯೋ ಮಾಡಿದಕ್ಕೆ ವಿರೋಧ | ಪೊಲೀಸರಿಗೆ ದೂರು
ದೇಶದಿಂದಲೇ ಬಿಜೆಪಿಯನ್ನು ಕಿತ್ತೊಗೆಯುತ್ತೇವೆ | ತಾಕತ್ ಇದ್ದರೆ ಟಿಎಂಸಿಯನ್ನು ತಡೆಯಿರಿ | ಅಭಿಷೇಕ್ ಬ್ಯಾನರ್ಜಿ ಸವಾಲು
ಪ್ರೇಯಸಿಯ ತಂದೆಯನ್ನೇ ಕೊಂದಿದ್ದವ ಮೈಸೂರು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ ಆರೋಪಿಗಳಲ್ಲಿ ಓರ್ವ!