ಮಂಗಳೂರು: ಹೆಡ್ ಕಾನ್ ಸ್ಟೇಬಲ್ ಸಿದ್ಧಾರ್ಥ್ ಜೆ. ಹೃದಯಾಘಾತದಿಂದ ನಿಧನ

siddharth j
02/10/2021

ಮಂಗಳೂರು: ಹೆಡ್ ಕಾನ್ ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉರ್ವದಲ್ಲಿ ನಡೆದಿದ್ದು, ಇವರ ನಿಧನಕ್ಕೆ ಮಂಗಳೂರು ಕಮಿಷನರ್  ಎನ್.ಶಶಿಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ  ಸಂತಾಪ ಸೂಚಿಸಿದ್ದಾರೆ.

41 ವರ್ಷ ವಯಸ್ಸಿನ ಸಿದ್ಧಾರ್ಥ್ ಜೆ. ನಿಧನರಾದ ಹೆಡ್ ಕಾನ್ ಸ್ಟೇಬಲ್ ಆಗಿದ್ದಾರೆ. ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಇವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಹೋಗಾಗಿ ಸಹೋದ್ಯೋಗಿಗಳು ಅವರನ್ನು ಮನೆಗೆ ಹೋಗುವಂತೆ ಹೇಳಿದ್ದರು. ಮನೆಗೆ ತೆರಳಿದ್ದ ಸಿದ್ಧಾರ್ಥ್ ಅವರಿಗೆ ನಸುಕಿನ ಜಾವ 3 ಗಂಟೆ ಸುಮಾರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.

ತಕ್ಷಣವೇ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮೃತರು ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿದ್ದು, ನಗರದ ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದರು. ಈ ಮೊದಲು ಇವರು ಮಂಗಳೂರು ದಕ್ಷಿಣ ಸಂಚಾರ ಠಾಣೆ ಸಹಿತ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಅಸ್ಪೃಶ್ಯತೆಯನ್ನು ಮುಚ್ಚಿಟ್ಟು ಮತಾಂತರದ ಹಿಂದೆ ಬಿದ್ದ ಬಿಜೆಪಿ ಪರಿವಾರ!

ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ ‘ಜೈ ಭೀಮ್’ ಬಹುನಿರೀಕ್ಷಿತ ಚಿತ್ರ

ವಾಹನ ಚಲಾಯಿಸುತ್ತಿರುವ ವೇಳೆ ಹೆಡ್ ಫೋನ್, ಬ್ಲೂಟೂತ್ ಬಳಸಿದರೆ ದಂಡ ಖಚಿತ

ಪರೀಕ್ಷೆ ಮುಗಿಸಿ ಹೊರ ಬಂದ ಸಹಪಾಠಿಯ ಕತ್ತು ಸೀಳಿ ಕೊಂದ ಪ್ರೇಮಿ!

ಉದ್ಯೋಗ ನೀಡುವ ಬದಲು, ಬಿಜೆಪಿ ಹಿಂದೂ ರಾಷ್ಟ್ರದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿದೆ | ಕುಮಾರಸ್ವಾಮಿ

ತಮ್ಮ ಮುಂದಿನ ನಡೆ ಏನು ಎಂದು ಸ್ಪಷ್ಟಪಡಿಸಿದ ಪಂಜಾಬ್ ನ ಮಾಜಿ ಸಿಎಂ ಅಮರೀಂದರ್ ಸಿಂಗ್!

ಇತ್ತೀಚಿನ ಸುದ್ದಿ

Exit mobile version