ಪ್ರತಿಭಾ ಕುಳಾಯಿ ಮನೆಗೆ ಪೊಲೀಸರು ಮಧ್ಯರಾತ್ರಿ ಹೋಗಿರುವುದು ಸರಿಯಲ್ಲ: ಮಾಜಿ ಸಚಿವ ರಮಾನಾಥ ರೈ ಹೇಳಿಕೆ
ಮಂಗಳೂರು: ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸುವವರನ್ನು ಹತ್ತಿಕ್ಕುವ ಕೆಲಸ ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ.
ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವ್ರು, ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಮನೆಗೆ ಅವರು ಇಲ್ಲದೇ ಇದ್ದಾಗ ಪೊಲೀಸರು ಮಧ್ಯರಾತ್ರಿ ವೇಳೆ ಹೋಗಿರುವುದು ಸರಿಯಾದ ಕ್ರಮವಲ್ಲ, ಆ ಹೊತ್ತಿನಲ್ಲಿ ಹೋಗಿ ಕಿರುಕುಳ ನೀಡುವ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದು, ಇದು ಹೋರಾಟಗಾರರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಹೇಳಿದ್ದಾರೆ.
ಇದು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕಾರ್ಯವಾಗಿದ್ದು, ಹೋರಾಟಗಾರರು ತಮ್ಮ ಸ್ವಾರ್ಥಕ್ಕಾಗಿ ಮಾಡುತ್ತಿಲ್ಲ. ಜನಸಾಮಾನ್ಯರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದ ರೈ, ಸಂಘಟನೆ ಸದಸ್ಯರು ಎಲ್ಲರೂ ಇದನ್ನು ಖಂಡಿಸಬೇಕು ಎಂದರು. ಪೊಲೀಸ್ ಇಲಾಖೆ ಕೈಗೊಂಡ ಕ್ರಮ ದಬ್ಬಾಳಿಕೆ ಕ್ರಮವಾಗಿದೆ, ಪ್ರತಿಭಟನಾಕಾರರ ಹಕ್ಕು ಕಿತ್ತುಕೊಳ್ಳುವ ಕೆಲಸವಾಗುತ್ತಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka