ಪೊಲೀಸ್ ಮಾಹಿತಿದಾರನನ್ನು ಕೊಂದು, ಮೂರು ವಾಹನಕ್ಕೆ ಬೆಂಕಿಯಿಟ್ಟ ನಕ್ಸಲರು! - Mahanayaka
12:07 PM Wednesday 5 - February 2025

ಪೊಲೀಸ್ ಮಾಹಿತಿದಾರನನ್ನು ಕೊಂದು, ಮೂರು ವಾಹನಕ್ಕೆ ಬೆಂಕಿಯಿಟ್ಟ ನಕ್ಸಲರು!

naxalite
22/01/2022

ಛತ್ತೀಸ್ ಗಡ: ನಕ್ಸಲ್ ಪೀಡಿದ ಪ್ರದೇಶವಾದ ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಪೊಲೀಸ್ ಮಾಹಿತಿದಾರನೋರ್ವನನ್ನು ನಕ್ಸಲರು ಬರ್ಬರವಾಗಿ ಹತ್ಯೆ ನಡೆಸಿದ್ದು, ಮೂರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಪೊಲೀಸ್ ಮಾಹಿತಿದಾರ ಅಂದೋ ರಾಮ್ ಎಂಬಾತನ ಮೇಲೆ ದಾಳಿ ನಡೆಸಿದ ನಕ್ಸಲರ್ ಆತನನ್ನು ಬರ್ಬರವಾಗಿ ಹತ್ಯೆ ನಡೆಸಿ, ಬಿಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಂಗ್ಲೂರು ರಸ್ತೆಯಲ್ಲಿ ಎಸೆದಿದ್ದು,  ಇನ್ನೊಂದು ಘಟನೆಯಲ್ಲಿ  ಬಿಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚೆರ್ಕಂಟಿ ಪಟೇಲ್ ಪರಾ ಗ್ರಾಮದಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಮೂರು ವಾಹನಗಳಿಗೆ ನಕ್ಸಲರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಂದೋರಾಮ್ ಮೃತದೇಹವನ್ನು ಪೊಲೀಸರು ವಶಕ್ಕೆ  ಪಡೆದುಕೊಂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಸುವನ್ನು ಮೇಯಿಸಲು ಹೋಗಿದ್ದ ವೃದ್ಧ ಹುಲಿ ದಾಳಿಗೆ ಬಲಿ!

ಹಾಲು, ನೀರು, ವಿದ್ಯುತ್ ದರ ಏರಿಕೆ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಎಸಿಬಿ ದಾಳಿ : ಮುಜರಾಯಿ ತಹಶೀಲ್ದಾರ್ ಬಂಧನ

ಅಪ್ರಾಪ್ತೆ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ಎರಡನೇ ಏಕದಿನ ಪಂದ್ಯ: ಭಾರತಕ್ಕೆ ಸೋಲು

 

ಇತ್ತೀಚಿನ ಸುದ್ದಿ