ಪೊಲೀಸರ ನಡುವೆಯೇ ಘರ್ಷಣೆ: ಹೆಡ್ ಕಾನ್ಸ್ ಟೇಬಲ್ ಗೆ ಗುಂಡು ಹಾರಿಸಿ ಹತ್ಯೆ ಮಾಡಿದ ಕಾನ್ಸ್ ಟೇಬಲ್
ಕಥುವಾ: ಪೊಲೀಸರ ನಡುವೆಯೇ ನಡೆದ ಘರ್ಷಣೆಯಲ್ಲಿನ ಹೆಡ್ ಕಾನ್ಸ್ ಟೇಬಲ್ ವೋರ್ವರು ಹತ್ಯೆಗೀಡಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದ್ದು, ಕರ್ತವ್ಯದ ಬಳಿಕ ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಮಾಹಿತಿಗಳ ಪ್ರಕಾರ, ಬುಧವಾರ ತಡ ರಾತ್ರಿ ಕಥುವಾ ಜಿಲ್ಲೆಯ ಜಿಲ್ಲಾ ಪೊಲೀಸ್ ಲೈನ್ ನಲ್ಲಿ ಈ ದುರ್ಘಟನೆ ನಡೆದಿದೆ. ಕರ್ತವ್ಯ ಮುಗಿಸಿ ಪೊಲೀಸ್ ಲೈನ್ ಗೆ ಬಂದಿದ್ದ ಪೊಲೀಸರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಘರ್ಷಣೆ ನಡೆಸಿದೆ ಎಂದು ತಿಳಿದು ಬಂದಿದೆ.
ಇನ್ನೂ ಘರ್ಷಣೆಯ ಸಂದರ್ಭದಲ್ಲಿ ಕಾನ್ಸ್ ಟೇಬಲ್ ವೋರ್ವ ಪಿಸ್ತೂಲ್ ನಿಂದ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ಹೆಡ್ ಕಾನ್ಸ್ ಟೇಬಲ್ ಮಹಮ್ಮದ್ ಯೂನಸ್ ಎಂಬವರು ಸಾವನ್ನಪ್ಪಿದ್ದಾರೆ. ಘಟನೆಯ ಬಳಿಕ ಗುಂಡು ಹಾರಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸರ ನಡುವೆ ಯಾವ ಕಾರಣಕ್ಕಾಗಿ ಘರ್ಷಣೆ ನಡೆದಿದೆ ಎನ್ನುವುದು ತಿಳಿದು ಬಂದಿಲ್ಲ. ಕರ್ತವ್ಯದಿಂದ ಮರಳಿದ ಬಳಿಕ ಏಕಾಏಕಿ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ತೀವ್ರ ಮಾತಿನ ಚಕಮಕಿಯ ಬಳಿಕ ಘರ್ಷಣೆ ಆರಂಭವಾಗಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾನ್ಸ್ ಟೇಬಲ್ ಪಿಸ್ತೂಲ್ ನಿಂದ ಶೂಟ್ ಮಾಡಿದ್ದಾನೆ. ಎದುರಿದ್ದ ಹೆಡ್ ಕಾನ್ಸ್ ಟೇಬಲ್ ಮಹಮ್ಮದ್ ಯೂನಸ್ ಗುಂಡೇಟಿಗೆ ಬಲಿಯಾಗಿದ್ದಾರೆ. ಸದ್ಯ ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನಷ್ಟು ಸುದ್ದಿಗಳು…
ಬಿಜೆಪಿ ಮುಖಂಡನನ್ನು ಕಾರಿನ ಡಿಕ್ಕಿಯಲ್ಲಿ ಹಾಕಿ, ಬೆಂಕಿ ಹಚ್ಚಿ ಭೀಕರ ಹತ್ಯೆ!
ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದವರು ಯಾರು? | ತಡ ರಾತ್ರಿ ನಡೆದ್ದದ್ದೇನು?
ಪ್ರೇಮ ನಿವೇದನೆ ತಿರಸ್ಕರಿಸಿದ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದರೆ ಹುಷಾರ್: ಕೇರಳ ಸಿಎಂ ಪಿಣರಾಯಿ ವಿಜಯನ್ ಎಚ್ಚರಿಕೆ