ಪೊಲೀಸರ ಮೇಲೆ ಹೆಜ್ಜೇನು ದಾಳಿ: ಇಬ್ಬರು ಗಂಭೀರ
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ವರದಿಯಾಗಿದೆ.
ಇಂದು ಬೆಳಗ್ಗೆ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಫ್ರೀಡಂ ಪಾರ್ಕ್ನಲ್ಲಿ ಬಂದೋಬಸ್ತ್ ಗಾಗಿ ಆಗಮಿಸಿದ್ದರು. ಈ ವೇಳೆ ಫ್ರೀಡಂ ಪಾರ್ಕ್ ಮುಂದಿದ್ದ ಮರದಲ್ಲಿ ಗೂಡು ಕಟ್ಟಿಕೊಂಡಿದ್ದ ಹೆಜ್ಜೇನು ಏಕಾಏಕಿ ಪೊಲೀಸರ ಮೇಲೆ ದಾಳಿ ಮಾಡಿದೆ.
ಘಟನೆಯಲ್ಲಿ ಮಹಿಳಾ ಸಿಬ್ಬಂದಿ ಸೇರಿ 10ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಜ್ಜೇನು ದಾಳಿಯಿಂದ ಇಬ್ಬರು ಪೊಲೀಸರು ಗಂಭೀರ ಗಾಯಗೊಂಡಿದ್ದು, ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಚ್ಚಾ ತೈಲ ಬೆಲೆಯಲ್ಲಿ ಬಾರೀ ಇಳಿಕೆ
ಯುದ್ದ ಭೂಮಿಯಲ್ಲಿ ಉಕ್ರೇನಿಯನ್ ಸೈನಿಕನ ವಿಚಿತ್ರ ಪ್ರೇಮ ನಿವೇದನೆ
ಪಂಚರಾಜ್ಯ ಚುನಾವಣೆ: ರಾಜ್ಯದ ಮೇಲೆ ಪರಿಣಾಮ ಬೀರಲ್ಲ; ಸಚಿವ ವಿ.ಸೋಮಣ್ಣ
ಪಂಜಾಬ್ ನಲ್ಲಿ ಆಮ್ ಆದ್ಮಿಗೆ ಮುನ್ನಡೆ; ನವಜೋತ್ ಸಿಂಗ್ ಸಿಧು ಎರಡನೇ ಸ್ಥಾನಕ್ಕೆ
ಸೊಸೆ ಮೇಲಿನ ಕೋಪ: ಮೊಮ್ಮಗಳನ್ನು ಬಲಿ ಪಡೆದ ಅತ್ತೆ