ಕರ್ತವ್ಯ ನಿರತ ಪೊಲೀಸ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!
ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿಯಲ್ಲಿ ನಡೆದಿದೆ.
ಕಿರಣ್ ಕೊಪ್ಪದ ಮೃತ ಪೊಲೀಸ್ ಪೇದೆಯಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಪೇದೆ ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಸೆಕೆಂಡ್ ಶಿಫ್ಟ್ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ರೈಫಲ್ ಮೂಲಕ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಳೆದ 20 ವರ್ಷಗಳಿಂದ ಡಿ.ಆರ್.ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಣ್ ಅವರು ಕೌಟುಂಬಿಕ ಕಲಹದಿಂದ ನೊಂದಿದ್ದರು ಎನ್ನಲಾಗಿದೆ. ಪತ್ನಿ ವಿಚ್ಛೇದನಕ್ಕೆ ಮುಂದಾಗಿದ್ದು, ಕಿರಣ್ ಅವರ ಆದಾಯದಲ್ಲಿ ಅರ್ಧದಷ್ಟು ಪತ್ನಿ ಮಕ್ಕಳಿಗೆ ನೀಡಬೇಕು ಎಂದು ಕೋರ್ಟ್ ಆದೇಶವಾಗಿತ್ತು. ನಾನೇಕೆ ನನ್ನ ವೇತನ ನೀಡಬೇಕು ಎಂದು ಅವರು ಮಾನಸಿಕವಾಗಿ ನೊಂದಿದ್ದರು ಎಂದು ವರದಿಗಳಿಂದ ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾಶ್ಮೀರ ಹತ್ಯಾಕಾಂಡಕ್ಕೂ ದನ ಸಾಗಾಟದ ಹೆಸರಿನ ಹತ್ಯಾಕಾಂಡಕ್ಕೂ ವ್ಯತ್ಯಾಸವಿಲ್ಲ: ನಟಿ ಸಾಯಿ ಪಲ್ಲವಿ
ಪೊಲೀಸ್ ಠಾಣೆಯಲ್ಲೇ ಪಿಎಸ್ ಐ ಹರೀಶ್ ಅರೆಸ್ಟ್!
ಅಲ್ಪಸಂಖ್ಯಾತ ಸಮಾವೇಶದಲ್ಲಿ ಎಂಟಿಬಿ ‘ನಾಗಿಣಿ’ ಡಾನ್ಸ್!
ನರೇಂದ್ರ ಮೋದಿ ನಾಯಿಗಿಂತಲೂ ಕಡೆಯಾಗಿ ಸಾಯುತ್ತಾನೆ: ನಾಲಿಗೆ ಹರಿಯಬಿಟ್ಟ ಕಾಂಗ್ರೆಸ್ ನಾಯಕ