ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಪೊಲೀಸರ ದಾಳಿ: ಇಬ್ಬರು ಪಿಂಪ್ ಗಳ ಅರೆಸ್ಟ್

ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಮನೆಗೆ ಜು.21ರಂದು ರಾತ್ರಿ ವೇಳೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಇಬ್ಬರು ಪಿಂಪ್ ಗಳನ್ನು ಬಂಧಿಸಿದ್ದಾರೆ.
ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಬಂಧಿತ ಆರೋಪಿಗಳು. ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ ಮೂವರು ಬೆಂಗಳೂರು ಮೂಲ ಹಾಗೂ ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್ ಹಾಗೂ ಮುಂಬೈ ನಿವಾಸಿಗಳು ಸೇರಿದಂತೆ 5 ಮಂದಿ ನೊಂದ ಮಹಿಳೆಯರನ್ನು ರಕ್ಷಿಸಿದ್ದಾರೆ. ಬಂಧಿತರಿಂದ 4 ಮೊಬೈಲ್, 1 ಕಾರು, 2 ಬೈಕ್ ಹಾಗೂ 10,000ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅನೈತಿಕ ಚಟುವಡಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಪ್ರಮುಖ ಆರೋಪಿ ಖಾಲಿದ್ ಎಂಬಾತ ಸ್ಥಳದಿಂದ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ ಶಾಂತಿನಗರದ ಮನೆಯ ಮೇಲೆ ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್ ನೇತೃತ್ವದ ತಂಡ ದಾಳಿ ಮಾಡಿ ಮನೆಯನ್ನು ವೇಶ್ಯಾವಾಟಿಕೆಗೆ ಚಟುವಟಿಕೆಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಮನೆಯನ್ನು ಜಪ್ತಿ ಮಾಡಲಾಗಿದೆ.
ಉಡುಪಿ ಎಸ್ಪಿ ಅಕ್ಷಯ್ ಮಚ್ಚಿಂದ್ರ ಹಾಕೆ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ., ಉಡುಪಿ ಡಿವೈಎಸ್ಪಿದಿನಕರ ಕೆ.ಪಿ. ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ನಿರೀಕ್ಷಕ ದಿವಾಕರ್ ಹಾಗೂ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ ಟಿ.ವಿ. ನೇತೃತ್ವದಲ್ಲಿ ಮಣಿಪಾಲ ಎಸ್ಸೈ ಅಬ್ದುಲ್ ಖಾದರ್, ಸಿಬ್ಬಂದಿ ಸುಕುಮಾರ್ ಶೆಟ್ಟಿ, ಇಮ್ರಾನ್, ಸುರೇಶ್ ಕುಮಾರ್, ಜ್ಯೋತಿ ನಾಯಕ್, ಅರುಣ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw