ಒಂದು ಕೋಟಿ ಬೆಟ್ಟಿಂಗ್ ಗೆ ಆಹ್ವಾನ ನೀಡಿದ ಪುರಸಭಾ ಸದಸ್ಯನ ಮನೆ ಮೇಲೆ ಪೊಲೀಸ್ ರೇಡ್ - Mahanayaka
8:15 AM Thursday 12 - December 2024

ಒಂದು ಕೋಟಿ ಬೆಟ್ಟಿಂಗ್ ಗೆ ಆಹ್ವಾನ ನೀಡಿದ ಪುರಸಭಾ ಸದಸ್ಯನ ಮನೆ ಮೇಲೆ ಪೊಲೀಸ್ ರೇಡ್

betting
12/05/2023

ನಿರಂಜನ್ ಪರ ಬೆಟ್ಟಿಂಗ್ ಗೆ ಒಂದು ಕೋಟಿಗೆ ಆಹ್ವಾನ ನೀಡಿದ್ದ ಪುರಸಭಾ ಸದಸ್ಯನ ಮನೆ ಮೇಲೆ ಪೊಲೀಸ್ ರೇಡ್ ಆಗಿದೆ.

ಗುಂಡ್ಲುಪೇಟೆ ಪಟ್ಟಣ ಪುರಸಭಾ ಸದಸ್ಯ ಕಿರಣ್ ಗೌಡ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ ನಡೆಸಿದ್ದು, ಕೋಟಿ ಬೆಟ್ಟಿಂಗ್ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ನೆನ್ನೆಯಷ್ಟೇ ಬಿಜೆಪಿ ಅಭ್ಯರ್ಥಿ ಪರ ಕಿರಣ್ ಗೌಡ ಒಂದು ಕೋಟಿ ಬೆಟ್ಟಿಂಗ್ ಗೆ ಆಹ್ವಾನ ನೀಡಿ ವಿಡಿಯೋ ಹರಿಬಿಟ್ಟಿದ್ದ ಈ ವಿಡಿಯೋ ಭಾರೀ ವೈರಲ್ ಆಗಿತ್ತು.

ಫಲಿತಾಂಶಕ್ಕೆ ಒಂದೇ ದಿನ ಬಾಕಿ ಇರುವಾಗಲೇ ಬೆಟ್ಟಿಂಗ್ ಆಹ್ವಾನ ನೀಡಿದ್ದ ಪುರಸಭಾ ಸದಸ್ಯ ಕಿರಣ್ ಗೌಡ ದಾಳಿ ನಡೆದಿದ್ದು, ಮನೆಯಲ್ಲಿನ ದಾಖಲೆಗಳನ್ನ ಪೊಲೀಸ್  ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ರಾತ್ರಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ಪಿ.ಐ.ಮುದ್ದುರಾಜ್, ಸಬ್ ಇನ್ ಸ್ಪೆಕ್ಟರ್ ಕಿರಣ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ