ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ: ಪ್ರಕರಣ ದಾಖಲು
ಮಂಗಳೂರು: ಕಾಸರಗೋಡು ಮೂಲದ ವ್ಯಕ್ತಿಯೋರ್ವ ಕದ್ದ ವಾಚ್‌ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದನೆಂಬ ಖಚಿತ ಮಾಹಿತಿಯ ಮೇರೆಗೆ ಆತನನ್ನು ಬಂಧಿಸಲು ಬಂದಿರುವ ಮಂಗಳೂರು ಉತ್ತರ ಠಾಣೆಯ ಪೊಲೀಸ್ ಸಿಬ್ಬಂದಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಸೋಮವಾರ ಸಂಜೆ ನಡೆದಿದೆ.
ಮಂಗಳೂರಿನಲ್ಲಿ ದುಬೈ ಬಜಾರ್ನಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ದುಬಾರಿ ವಾಚ್ ಮಾರಾಟ ಮಾಡಲು ಬಂದಿದ್ದಾನೆ. ಈ ವೇಳೆ ಅನುಮಾನಗೊಂಡ ಅಂಗಡಿ ಮಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ವ್ಯಕ್ತಿಯನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಈ ವೇಳೆ ಆರೋಪಿ ತಪ್ಪಿಸುವ ಭರದಲ್ಲಿ ಪೊಲೀಸ್ ಸಿಬ್ಬಂದಿ ವಿನೋದ್ ಅವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ.
ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಜಾಬ್ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ರೆಸ್ಟೋರೆಂಟ್ ಮೇಲೆ ತಂಡದಿಂದ ದಾಳಿ
ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಮದುವೆ ಮುಗಿಸಿ ಬರುತ್ತಿದ್ದ ವಾಹನ ಕಮರಿಗೆ ಉರುಳಿ ಬಿದ್ದು10 ಮಂದಿ ಸಾವು
ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷ ಭಯೋತ್ಪಾದಕ ಎಂದ ವಿದೇಶಿ ಪತ್ರಕರ್ತ: ಡಿಜಿಪಿ ಸ್ಪಷ್ಟನೆ