ಪೊಲೀಸ್ ಠಾಣೆಯಲ್ಲೇ ಪಿಎಸ್ ಐ ಹರೀಶ್ ಅರೆಸ್ಟ್!
ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನಗರದ ಬ್ಯಾಡರಹಳ್ಳಿ ಪಿಎಸ್ ಐ ಕೆ. ಹರೀಶ್ ಅವರನ್ನು ಠಾಣೆಯಲ್ಲೇ ಬಂಧಿಸಿದ್ದಾರೆ.
ವರದಿಗಳ ಪ್ರಕಾರ, ಇತ್ತೀಚೆಗೆ ನಡೆದಿದ್ದ 545 ಪಿಎಸ್ಐ ಹುದ್ದೆಗಳ ಅಕ್ರಮ ಪ್ರಕರಣದಲ್ಲಿ ಬಂಧಿತನಾದ ಅಭ್ಯರ್ಥಿಯೊಬ್ಬರಿಗೆ ಸಹಾಯ ಮಾಡಿದ್ದ. ಅಭ್ಯರ್ಥಿ ಹೇಳಿಕೆ ಆಧರಿಸಿ ಹರೀಶ್ನನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ ಎಂದು ಸಿಐಡಿ ಮೂಲಗಳು ಹೇಳಿವೆ.
ರಿಸರ್ವ್ ಸಬ್ ಇನ್ಸ್ಪೆಕ್ಟರ್ (ಆರ್ಎಸ್ಐ) ಜೊತೆ ಒಡನಾಟ ಹೊಂದಿದ್ದ ಹರೀಶ್, ಪರಿಚಯಸ್ಥ ಅಭ್ಯರ್ಥಿಯಿಂದ ರೂ. 60 ಲಕ್ಷ ಕೊಡಿಸಿ ಹುದ್ದೆಗೆ ಅಕ್ರಮವಾಗಿ ಆಯ್ಕೆಯಾಗುವಂತೆ ಮಾಡಿದ್ದ. ಇದಕ್ಕೆಂದು ಆತ ಕಮಿಷನ್ ಸಹ ಪಡೆದಿದ್ದ. ಈ ಬಗ್ಗೆ ಮಾಹಿತಿ ಖಚಿತಪಡಿಸಿಕೊಳ್ಳಲು ಹರೀಶ್ ಗೆ ನೋಟಿಸ್ ನೀಡಲಾಗಿತ್ತು. ಆದರೆ, ಆತ ವಿಚಾರಣೆಗೆ ಬಾರದ ಹಿನ್ನೆಲೆಯಲ್ಲಿ ಇದೀಗ ಆತನನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಲ್ಪಸಂಖ್ಯಾತ ಸಮಾವೇಶದಲ್ಲಿ ಎಂಟಿಬಿ ‘ನಾಗಿಣಿ’ ಡಾನ್ಸ್!
ನರೇಂದ್ರ ಮೋದಿ ನಾಯಿಗಿಂತಲೂ ಕಡೆಯಾಗಿ ಸಾಯುತ್ತಾನೆ: ನಾಲಿಗೆ ಹರಿಯಬಿಟ್ಟ ಕಾಂಗ್ರೆಸ್ ನಾಯಕ
ಹಸುವಿಗೆ ಚಿಕಿತ್ಸೆ ಕೊಡುವ ನೆಪದಲ್ಲಿ ಕರೆದು ಪಶುವೈದ್ಯನಿಗೆ ಬಲವಂತದ ಮದುವೆ!
ತುಮಕೂರು: ಡಿಎಸ್ ಎಸ್ ಮುಖಂಡನನ್ನು ಕೊಚ್ಚಿ ಬರ್ಬರ ಹತ್ಯೆ
ಜಾತ್ರೆ ವೇಳೆ ಉರುಳಿ ಬಿದ್ದ ರಥ: ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು