ಪೊಲೀಸರ ಎದುರೇ ಬೆತ್ತಲಾಗಿ ಗಾಲ್ಫ್ ಕಾರ್ಟ್ ಓಡಿಸಿ ಶಾಕ್ ನೀಡಿದ ಯುವತಿ!
ಫ್ಲೋರಿಡಾ: ಮಾರಕಾಸ್ತ್ರ ಹಿಡಿದುಕೊಂಡು ಕುಡಿದ ಮತ್ತಿನಲ್ಲಿ ಅವಾಂತರ ಸೃಷ್ಟಿಸುತ್ತಿದ್ದ ಯುವಕನ್ನು ಅರೆಸ್ಟ್ ಮಾಡಲು ಹೋದ ಪೊಲೀಸರಿಗೆ ಯುವತಿಯೋರ್ವಳು ಶಾಕ್ ನೀಡಿದ್ದು, ಪೊಲೀಸರ ಎದುರೇ ಬೆತ್ತಲಾಗುವ ಮೂಲಕ ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಾಳೆ.
ಈ ಘಟನೆ ನಡೆದಿರುವುದು ಅಮೆರಿಕಾದ ಫ್ಲೋರಿಡಾದಲ್ಲಿ. ಶಸ್ತ್ರಸಜ್ಜಿತ ಯುವಕನೋರ್ವ ಕುಡಿದು ಚಿತ್ತಾಗಿ ಅವಾಂತರ ಸೃಷ್ಟಿಸಿದ್ದಾನೆ. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಆತನನ್ನು ಬಂಧಿಸಲು ಆತನ ಹಿಂದೆ ಬಿದ್ದಿದ್ದಾರೆ. ಈ ವೇಳೆ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ.
ಇತ್ತ ಆರೋಪಿಯನ್ನು ಬೆನ್ನಟ್ಟಲು ಪೊಲೀಸರು ಆರಂಭಿಸುತ್ತಿದ್ದಂತೆಯೇ 28 ವರ್ಷ ವಯಸ್ಸಿನ ಯುವತಿ ಜೆಸ್ಸಿಕಾ ಎಂಬಾಕೆ ಬೆತ್ತಲಾಗಿ ಗಾಲ್ಫ್ ಕಾರ್ಟ್ ಓಡಿಸುವ ಮೂಲಕ ಪೊಲೀಸರ ಗಮನವನ್ನು ಬೇರೆಡೆಗೆ ಸೆಳೆಯಲು ಮುಂದಾಗಿದ್ದು, ಈ ವೇಳೆ ಪೊಲೀಸರ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಯುವತಿ ಮಾಡಿದ ಈ ಕೆಲಸದಿಂದಾಗಿ ಆರೋಪಿಯು ಪೊಲೀಸರಿಂದ ತಪ್ಪಿಸಿಕೊಂಡು ಹೋಗಿದ್ದ. ಈ ವೇಳೆ ಪೊಲೀಸರು ಮತ್ತಷ್ಟು ಪೊಲೀಸರ ಬ್ಯಾಕಪ್ ಪಡೆದುಕೊಂಡು ಆರೋಪಿಯನ್ನು ಬೆನ್ನಟ್ಟಿದ್ದಾರೆ. ಪೊಲೀಸರು ಮತ್ತೆ ಬೆನ್ನಟ್ಟುತ್ತಿದ್ದಾರೆ ಎನ್ನುವುದು ತಿಳಿಯುತ್ತಿದ್ದಂತೆಯೇ ಆರೋಪಿಯು ಪೊಲೀಸರ ಮೇಲೆ ಫೈರಿಂಗ್ ಮಾಡಿದ್ದಾನೆ. ಮನೆಯ ಛಾವಣೀ ಮೇಲೆ ಹತ್ತಿ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಆರೋಪಿಯನ್ನು ಸುತ್ತುವರಿದು ಗನ್ ಪಾಯಿಂಟ್ ನಲ್ಲಿ ಅರೆಸ್ಟ್ ಮಾಡಿದ್ದಾರೆ.
ಇನ್ನಷ್ಟು ಸುದ್ದಿಗಳು…
ಗಣೇಶೋತ್ಸವದ ಶುಭಾಶಯ ಕೋರಿದ ಗಣ್ಯರು: ಕೊರೊನಾ ತೊಲಗಲಿ ಎಂದು ಪ್ರಾರ್ಥಿಸಲು ಕರೆ
ಸಾಬಿಯಾ ಸೈಫಿ ಅತ್ಯಾಚಾರ, ಬರ್ಬರ ಹತ್ಯೆ ವಿರುದ್ಧ ಎಸ್ ಡಿಪಿಐ ಬೃಹತ್ ಹಕ್ಕೊತ್ತಾಯ
ಸಹೋದರಿಗೆ ಬಾಗಿನ ನೀಡಿ ಪುತ್ರಿಯೊಂದಿಗೆ ಬೈಕ್ ನಲ್ಲಿ ಬರುತ್ತಿದ್ದ ಸಹೋದರ, ಪುತ್ರಿ ಇಬ್ಬರೂ ಅಪಘಾತಕ್ಕೆ ಬಲಿ
ದಂಪತಿಯನ್ನು ಅಡ್ಡಗಟ್ಟಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ದೋಚಿದ ದರೋಡೆಕೋರರು