ಇಂದು ಹನೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಕಾಶ್ ಅಂಬೇಡ್ಕರ್, ಹೆಚ್ ಡಿಕೆ ಮತಯಾಚನೆ
ಚಾಮರಾಜನಗರ: ಚಾಮರಾಜನಗರದ ಹನೂರಿಗೆ ಇಂದು ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಆಗಮಿಸಲಿದ್ದು, ಜೆಡಿಎಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಎಂ.ಆರ್.ಮಂಜುನಾಥ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರದ ಕೊನೆ ದಿನಗಳಲ್ಲಿ ಹನೂರು ಮೇಲೆ ಹೆಚ್ ಡಿಕೆ ಕಣ್ಣಿಟ್ಟಿದ್ದಾರೆ.
ಇಂದು ಬೆಳಗ್ಗೆ 9:30ರಿಂದ ರೋಡ್ ಶೋ ಆರಂಭವಾಗಲಿದ್ದು, ತೆರೆದ ವಾಹನದಲ್ಲಿ ಕುಮಾರಸ್ವಾಮಿ ಭಾಷಣ ಮಾಡಲಿದ್ದು, ಪ್ರಕಾಶ್ ಅಂಬೇಡ್ಕರ್ ಕುಮಾರಸ್ವಾಮಿಗೆ ಸಾಥ್ ನೀಡಲಿದ್ದಾರೆ. ಪ್ರಕಾಶ್ ಅಂಬೇಡ್ಕರ್ ಆಗಮನ ಹಿನ್ನೆಲೆಯಲ್ಲಿ 10 ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw