ಮತಗಟ್ಟೆ ಧ್ವಂಸ: ಚುನಾವಣೆ ಬಹಿಷ್ಕಾರ ಹಾಕಿದ್ದ ತಂಡದಿಂದ ಮತಗಟ್ಟೆ ಧ್ವಂಸ
ಚಾಮರಾಜನಗರ: ಮತದಾನಕ್ಕೆ ಬಹಿಷ್ಕಾರ ಹಾಕಿದ್ದ ತಂಡವೊಂದು ಅಧಿಕಾರಿಗಳ ಜೊತೆಗೆ ಮಾತಿನ ಚಕಮಕಿ ಏರ್ಪಟ್ಟ ಬೆನ್ನಲ್ಲೇ ಮತಗಟ್ಟೆಯನ್ನು ಧ್ವಂಸ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮಪಂಚಾಯತ್ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ವಂಚಿತರು ಮತದಾನ ಬಹಿಷ್ಕರಿಸಿದ್ದರು. ಗ್ರಾಮಸ್ಥರ ಮನವೊಲಿಸಲು ತಹಶೀಲ್ದಾರ್ ಗುರುಪ್ರಸಾದ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಉಮೇಶ್ ಹಾಗೂ ಪೊಲೀಸರು ಮುಂದಾಗಿದ್ದರು.
ಹೀಗಾಗಿ ಕೆಲವು ಮತದಾರರು ಮತ ಚಲಾಯಿಸಲು ಆಗಮಿಸಿರುವುದನ್ನು ಕೆರಳಿದ ಮತ್ತೊಂದು ಗುಂಪಿನವರು ಮತಯಂತ್ರವನ್ನು ನಾಶ ಮಾಡಿ, ಮತಗಟ್ಟೆಯನ್ನು ಧ್ವಂಸಗೊಳಿಸಿದ್ದಾರೆ. ಇದರಿಂದಾಗಿ ಈ ಮತಗಟ್ಟೆಯಲ್ಲಿ ಮತದಾನ ಸ್ಥಗಿತಗೊಂಡಿದೆ. ಘಟನೆಯಿಂದಾಗಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth