ಅಂಚೆ ಇಲಾಖೆಯ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ : 10th ಪಾಸಾದವರು ಅರ್ಜಿ ಸಲ್ಲಿಸಿ
![post office gds recruitment](https://www.mahanayaka.in/wp-content/uploads/2025/02/Post-office-GDS-Recruitment.jpg)
Post office GDS Recruitment 2025: ಭಾರತೀಯ ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಗೆ ಕೇವಲ 10th ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರಿದ್ದು, ಪ್ರತಿಯೊಬ್ಬ ಅರ್ಹ ಅಭ್ಯರ್ಥಿ ಇದರ ಸದುಪಯೋಗಪಡೆಸಿಕೊಳ್ಳಿ.
ಎಷ್ಟು ಹುದ್ದೆಗಳ ನೇಮಕಾತಿ ನಡೆಯುತ್ತಿದೆ?
ದೇಶಾದ್ಯಂತ ಒಟ್ಟು 21,413 ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ. ಇದರಲ್ಲಿ ನಮ್ಮ ಕರ್ನಾಟಕ ರಾಜ್ಯಕ್ಕೆ ಒಟ್ಟು 1,135 ಹುದ್ದೆಗಳನ್ನು ಮಿಸಲಿಟ್ಟಿದ್ದಾರೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಅಂಚೆ ಇಲಾಖೆಯ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಎಂದು ನೋಡುವುದಾದರೆ, 10ನೇ ತರಗತಿ ಪಾಸಾಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.
ಅದೇ ವಯೋಮಿತಿ ಅರ್ಹತೆ ನೋಡುವುದಾದರೆ ಅರ್ಜಿ ಸಲ್ಲಿಸಲು 18 ರಿಂದ 40 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು. ಸಾಮಾನ್ಯ ನೇಮಕಾತಿಯ ನಿಯಮಗಳಂತೆ ಈ ನೇಮಕಾತಿಯಲ್ಲಿ ಕೂಡ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿಯಲ್ಲಿ ಸಡಲಿಕ್ಕೆ ನೀಡಲಾಗುತ್ತದೆ.
ನೇಮಕಾತಿ ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಆರಂಭ ದಿನ : 10 ಫೆಬ್ರವರಿ 2025
* ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಕೊನೆಯ ದಿನ : 03 ಮಾರ್ಚ್ 2025
ಅರ್ಜಿ ಹೇಗೆ ಸಲ್ಲಿಸಬೇಕು?
ಅಂಚೆ ಇಲಾಖೆಯ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಅರ್ಹತೆ ಹೊಂದಿದ್ದಲ್ಲಿ, ಮೊದಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಅಧಿಸುಚನೆಯಲ್ಲಿ ತಿಳಿಸಿರುವ ಸಂಪೂರ್ಣ ಅರ್ಹತೆ ಹಾಗೂ ಇತರೆ ನೇಮಕಾತಿ ವಿವರ ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿ.
ಅಂಚೆ ಇಲಾಖೆಯ ಅಧಿಕೃತ ಜಾಲತಾಣ :
https://indiapostgdsonline.gov.in/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: