ಕಾಂಗ್ರೆಸ್ ಮುಖಂಡರು ಕೈಲಾಗದವರು(ನಾಮರ್ದರು): ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲೇ ಬಹಿಷ್ಕಾರದ ಪೋಸ್ಟರ್!
ಮೈಸೂರು: ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು(ನಾಮರ್ದರು) ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ ಹಾಕಲಾಗಿದೆ.
ಬಾಯಲ್ಲಿ ಅಂಬೇಡ್ಕರ್, ಭೀಮಾ ಎಂಬ ಜಪ. ಆದ್ರೆ, ಸಿದ್ದರಾಮಯ್ಯನವರ ಸ್ವಕ್ಷೇತ್ರದಲ್ಲೇ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಸರಿಯಾದ ಅನುದಾನ ನೀಡದೇ ಅಂಬೇಡ್ಕರ್ ಗೆ ಅವಮಾನಿಸಲಾಗುತ್ತಿದ್ದು, ಇದರಿಂದ ರೊಚ್ಚಿಗೆದ್ದಿರುವ ಗ್ರಾಮಸ್ಥರು ಕಾಂಗ್ರೆಸ್ ಮುಖಂಡರ ವಿರುದ್ಧವೇ ತಿರುಗಿಬಿದ್ದಿದ್ದಾರೆ.
ಚುನಾವಣೆಗೂ ಮುನ್ನ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಸೇರಿದಂತೆ ವಿವಿಧ ಭರವಸೆಗಳನ್ನು ಗ್ರಾಮಸ್ಥರಿಗೆ ನೀಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ನೀಡಿದ ಭರವಸೆಯನ್ನು ಮರೆತು ಹೋಗಿದ್ದು, ಇದರಿಂದ ಗ್ರಾಮಸ್ಥರು ರೊಚ್ಚಿಗೆದ್ದು ಕಾಂಗ್ರೆಸ್ ಮುಖಂಡರು ಕೈಲಾಗದವರು ನಾಮರ್ದರು ಎಂದು ಬಹಿರಂಗವಾಗಿಯೇ ಅಲ್ಲಲ್ಲಿ ಪೋಸ್ಟರ್ ಗಳನ್ನು ಹಾಕಿ ಬಹಿಷ್ಕಾರ ಹಾಕಿದ್ದಾರೆ.
ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ ಭರ್ಜರಿ ಪ್ರಚಾರ ಪಡೆದುಕೊಂಡಿದ್ದರು. ಆದರೆ ಕೇವಲ 3 ಲಕ್ಷ ರೂಪಾಯಿಯ ಬಿಡಿಗಾಸು ಪ್ರತಿಮೆ ನಿರ್ಮಾಣಕ್ಕೆ ಮೀಸಲಿಡಲಾಗಿದೆ. ಸಮುದಾಯದ ಮುಖಂಡರು 20 ಲಕ್ಷ ರೂಪಾಯಿ ಪ್ರತಿಮೆ ನಿರ್ಮಾಣಕ್ಕೆ ಮೀಸಲಿಡಬೇಕು ಎಂದು ಮನವಿ ಮಾಡಿದ್ದರು. ಆದರೆ ಕೇವಲ 3 ಲಕ್ಷ ರೂಪಾಯಿಯಲ್ಲೇ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದು, ಇದರಿಂದ ವ್ಯಾಪಕ ಆಕ್ರೋಶ ಕೇಳಿ ಬಂದಿದೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: