ಉತ್ತರಪ್ರದೇಶದ ಸೋಲಿಗೆ ಕಾರಣರಾದ ವ್ಯಕ್ತಿಯನ್ನು ತೆಗೆದುಹಾಕಲು ಪ್ರಭಾವಿ ನಾಯಕರು ವಿಫಲರಾಗಿದ್ದಾರೆ: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿಕೊಂಡು ಕಟು ಟೀಕೆ ಮಾಡಿರುವ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಉತ್ತರ ಪ್ರದೇಶದ ಲೋಕಸಭಾ ಚುನಾವಣೆಯಲ್ಲಿ ತಮ್ಮ ಚುನಾವಣಾ ಹಿನ್ನಡೆಗೆ ಕಾರಣವಾದ ವ್ಯಕ್ತಿಯನ್ನು ಹೊಣೆಗಾರರನ್ನಾಗಿ ಮಾಡಲು ಬಿಜೆಪಿಯ ಸ್ವಯಂ ಘೋಷಿತ ಪ್ರಬಲ ನಾಯಕರು ಹೆಣಗಾಡುತ್ತಿದ್ದಾರೆ ಎಂದಿದ್ದಾರೆ. ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಬಿಸಿ ಚರ್ಚೆಯ ಸಮಯದಲ್ಲಿ ಯಾದವ್ ಈ ರೀತಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಯಾದವ್, ಖಜಾನೆ ಪೀಠಗಳೊಂದಿಗೆ ಹಲವಾರು ಬಾರಿ ಮಾತಿನ ಚಕಮಕಿ ನಡೆಸಿದರು.
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ವಿಫಲರಾಗಿದ್ದಾರೆ ಎಂದು ಹೇಳಲಾದ ವೀಡಿಯೊವನ್ನು ಯಾದವ್ ಉಲ್ಲೇಖಿಸಿ ಮಾತನಾಡಿದ್ದಾರೆ. ಈ ವೀಡಿಯೊವನ್ನು ಹಲವಾರು ಸತ್ಯಶೋಧಕರು ಬಹಿರಂಗಪಡಿಸಿದ್ದಾರೆ. ಆದಿತ್ಯನಾಥ್ ನಿಜವಾಗಿಯೂ ಪ್ರಧಾನಿಯನ್ನು ಸ್ವಾಗತಿಸಿದ್ದಾರೆ ಎಂದು ದೃಢಪಡಿಸಿದ್ದಾರೆ.
ತಮ್ಮನ್ನು ತಾವು ತುಂಬಾ ಶಕ್ತಿಶಾಲಿ ಎಂದು ಕರೆದುಕೊಳ್ಳುತ್ತಿದ್ದವರು ತಮ್ಮ ಸೋಲಿಗೆ ಕಾರಣವಾದ ವ್ಯಕ್ತಿಯನ್ನು ತೆಗೆದುಹಾಕಲು ಸಾಧ್ಯವಾಗುತ್ತಿಲ್ಲ ಎಂದು ಯಾದವ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ ಬಿಜೆಪಿ ಮುಖ್ಯಮಂತ್ರಿಯನ್ನು ಬದಲಾಯಿಸಲು ನೋಡುತ್ತಿದೆ ಎಂಬ ಕೆಲವು ವರದಿಗಳ ಬಗ್ಗೆ ಅವರು ಉದೇ ವೇಳೆ ಸುಳಿವು ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth