ಪ್ರವಾಹದಲ್ಲಿ ಸಿಲುಕಿ ವಾಲಿದ ಬಸ್: ಜೀವ ಉಳಿಸಲು ಬಸ್ ಕಿಟಕಿಯಿಂದ ಹಾರಿದ ಪ್ರಯಾಣಿಕರು - Mahanayaka

ಪ್ರವಾಹದಲ್ಲಿ ಸಿಲುಕಿ ವಾಲಿದ ಬಸ್: ಜೀವ ಉಳಿಸಲು ಬಸ್ ಕಿಟಕಿಯಿಂದ ಹಾರಿದ ಪ್ರಯಾಣಿಕರು

dehali
10/07/2023

ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಡೆಹ್ರಾಡೂನ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಹೀಗಾಗಿ ಪ್ರಯಾಣಿಕರು ಬಸ್‌ನ ಕಿಟಕಿಗಳಿಂದ ಹಾರುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಈ ದೃಶ್ಯದಲ್ಲಿ ಪ್ರವಾಹದ ರಭಸಕ್ಕೆ ಬಸ್ ವಾಲಿದ್ದನ್ನು ವಿಡಿಯೊದಲ್ಲಿ ಕಾಣಬಹುದು.
ಉತ್ತರ ಭಾರತದ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್ ಮತ್ತು ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ರಾಜ್ಯಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಹೆಚ್ಚಾಗಿದೆ.

ಮಳೆಯ ಅಬ್ಬರವು ವಿವಿಧೆಡೆ ನಾಶ ನಷ್ಟವನ್ನುಂಟು ಮಾಡಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಭೂಕುಸಿತ ಮತ್ತು ಮಳೆ ಸಂಬಂಧಿತ ಘಟನೆಗಳಿಂದ ಇದುವರೆಗೆ 28 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಮಂಡಿಯಲ್ಲಿರುವ ಪಂಚವಕ್ತ್ರ ಸೇತುವೆಯು ಕುಸಿದು ಬಿದ್ದಿದ್ದು, ವಿವಿಧ ಪ್ರದೇಶಗಳಲ್ಲಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹವನ್ನು ಉಂಟುಮಾಡಿತು.

ನದಿಯ ನೀರಿನ ಮಟ್ಟ ಹೆಚ್ಚಾದ ಕಾರಣ ಐತಿಹಾಸಿಕ ಸೇತುವೆ ಕೊಚ್ಚಿಹೋಗಿದೆ ಎಂದು ಮಂಡಿಯ ಹೆಚ್ಚುವರಿ ಜಿಲ್ಲಾಧಿಕಾರಿ ಅಶ್ವನಿ ಕುಮಾರ್ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಮಂಡಿ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ಬಿಯಾಸ್ ನದಿಯಿಂದ ಔತ್ ಗ್ರಾಮದಿಂದ ಬಂಜಾರ್ ಮತ್ತು ಪಾಂಡೋ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಗಳು ಕೊಚ್ಚಿ ಹೋಗಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ