ಪ್ರಧಾನಿ ಮೋದಿ ಭದ್ರತಾ ಲೋಪದ ತನಿಖೆ: ನಿ.ನ್ಯಾಯಮೂರ್ತಿ ಇಂದು ಮಲ್ಹೋತ್ರಾಗೆ ಬೆದರಿಕೆ
ನವದೆಹಲಿ: ಪ್ರಧಾನಿ ಮೋದಿ ಭದ್ರತಾ ಲೋಪದ ಕುರಿತು ತನಿಖೆ ನಡೆಸುತ್ತಿರುವ ತನಿಖಾ ಸಮಿತಿ ಮುಖ್ಯಸ್ಥೆ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಅವರಿಗೆ ಸಿಕ್ ಫಾರ್ ಜಸ್ಟೀಸ್ ಸಂಸ್ಥೆಯು ಬೆದರಿಕೆ ಹಾಕಿದ್ದು, ಆಡಿಯೋವನ್ನು ಬಿಡುಗಡೆ ಮಾಡಿದೆ.
ಸುಪ್ರೀಂ ಕೋರ್ಟ್ ಪ್ರಧಾನಿ ಮೋದಿ ಭದ್ರತಾ ಲೋಪದ ಕುರಿತು ತನಿಖೆ ನಡೆಸುವಂತೆ ಐವರ ಸಮಿತಿಯನ್ನು ರಚಿಸಿದ್ದು, ಇದಕ್ಕೆ ನಿ.ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಮುಖ್ಯಸ್ಥರಾಗಿದ್ದಾರೆ. ಭದ್ರತಾ ಲೋಪ ಪ್ರಕರಣದಿಂದ ದೂರ ಸರಿಯುವಂತೆ ತನಿಖಾ ಸಮಿತಿ ಮುಖ್ಯಸ್ಥರಿಗೆ ಬೆದರಿಕೆ ಹಾಕುತ್ತಿರುವುದು ಆಡಿಯೋದಲ್ಲಿದೆ. ಸಿಖ್ ಫಾರ್ ಜಸ್ಟೀಸ್(ಎಸ್‌ಎಫ್ ಜೆ) ಈ ಹಿಂದೆ ಕೂಡ ಹಲವು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದೆ.
ಇದೇ ತಿಂಗಳ 5 ರಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ನ ಫಿರೋಜ್ ಪುರಕ್ಕೆ ಹೋಗುತ್ತಿದ್ದಾಗ ರೈತರು ಪ್ರತಿಭಟನೆ ಮಾಡಿ ತಡೆ ನೀಡಿದ್ದರು ಎನ್ನಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಂಜಾಬ್ ವಿಧಾನಸಭೆ ಚುನಾವಣೆ: ಫೆ.20ಕ್ಕೆ ಮತದಾನ ಮುಂದೂಡಿಕೆ
ಚರ್ಮದ ಸಮಸ್ಯೆಗಳ ನಿವಾರಣೆಗೆ ವೀಳ್ಯದೆಲೆ ಪರಿಣಾಮಕಾರಿ
ಧರ್ಮಸ್ಥಳ: ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ 108 ಪುರೋಹಿತರಿಂದ ಮಹಾಮೃತ್ಯುಂಜಯ ಹೋಮ