ಕೇರಳ-ಪುತ್ತೂರು ಅಧಿಕೃತ ರಸ್ತೆ ಹೊರತು ಪಡಿಸಿ ಉಳಿದ ರಸ್ತೆಗೆ ಮಣ್ಣು ಹಾಕಿ ಮುಚ್ಚಲು ಶಾಸಕರಿಂದ ಸೂಚನೆ - Mahanayaka

ಕೇರಳ-ಪುತ್ತೂರು ಅಧಿಕೃತ ರಸ್ತೆ ಹೊರತು ಪಡಿಸಿ ಉಳಿದ ರಸ್ತೆಗೆ ಮಣ್ಣು ಹಾಕಿ ಮುಚ್ಚಲು ಶಾಸಕರಿಂದ ಸೂಚನೆ

sanjeev mattandoor
03/08/2021

ಪುತ್ತೂರು: ಮತ್ತೆ ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಪುತ್ತೂರು ಸಂಪರ್ಕಿಸುವ ಅಧಿಕೃತ ರಸ್ತೆಗಳನ್ನು ಹೊರತುಪಡಿಸಿ ಉಳಿದ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊವಿಡ್ ನಿರ್ವಹಣೆ ಸಂಬಂಧ ಪುತ್ತೂರಿನ ತಾಲೂಕು ಪಂಚಾಯತ್   ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶಾಸಕರು,  ಕೇರಳದಿಂದ ಪುತ್ತೂರು ಪ್ರವೇಶಿಸುವ  ಅಧಿಕೃತ ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ತಪಾಸಣೆ ನಡೆಸಬಹುದು. ಆದರೆ,  ಇತರ ರಸ್ತೆಗಳಲ್ಲಿ ಕೇವಲ ಬ್ಯಾರಿಕೇಡ್ ಗಳನ್ನು ಹಾಕಿ ಬಂದ್ ಮಾಡಲು ಸಾಧ್ಯವಿಲ್ಲ. ಆ ರೀತಿ ಮಾಡಿದರೆ, ಬ್ಯಾರಿಕೇಡ್ ಸರಿಸಿ ಒಳಗೆ ಪ್ರವೇಶಿಸುವ ಸಾಧ್ಯತೆಗಳಿವೆ. ಹಾಗಾಗಿ  ಕೊವಿಡ್ ನಿಯಂತ್ರಣಕ್ಕೆ ಬರುವವರೆಗೂ ಮಣ್ಣು ಹಾಕಿ ಸಣ್ಣ ರಸ್ತೆಗಳನ್ನು ಬಂದ್ ಮಾಡುವಂತೆ ಅವರು ಸೂಚನೆ ನೀಡಿದರು.

ಕೊವಿಡ್ ನಿಯಂತ್ರಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದ ಮಠಂದೂರು, ನಮ್ಮ ಜಿಲ್ಲೆಯಲ್ಲಿ ಕೊವಿಡ್ ರೇಟಿಂಗ್ ಶೇ.5ರ ಸಮೀಪಕ್ಕೆ ಬರುತ್ತಿದೆ. ಶೇ.5 ಆದರೆ ನಾವು ಖಂಡಿತಾ ಲಾಕ್ ಡೌನ್ ಮಾಡಲೇ ಬೇಕಾಗುತ್ತದೆ. ನಮಗೆ ಲಾಕ್ ಡೌನ್ ಬೇಕೋ? ಅನ್ ಲಾಕ್ ಬೇಕೋ? ಎಂದು ಪ್ರಶ್ನಿಸಿದ ಅವರು ಕೊರೊನಾ ನಿಯಂತ್ರಣಕ್ಕೆ ನಾವು ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಹೇಳಿದರು.

ಇನ್ನಷ್ಟು ಸುದ್ದಿಗಳು…

 

ಕೊರೊನಾ 3ನೇ ಅಲೆ ಭೀತಿ:  ಇಂದು ರಾತ್ರಿ 10ರಿಂದ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಜಾರಿ

ಪ್ರೀತಿಸಿಲು ನಿರಾಕರಿಸಿದ ಬಾಲಕಿಯನ್ನು ದಾರಿ ಮಧ್ಯೆ ತಡೆದು ಯುವಕನಿಂದ ಘೋರ ಕೃತ್ಯ!

“ಓ ಲಾರ್ಡ್ ಜೀಸಸ್, ಪ್ಲೀಸ್ ಹೆಲ್ಪ್ ಮೀ” ಎಂದು ಎನ್.ಮಹೇಶ್ ಬೇಡುತ್ತಿರುವ ವಿಡಿಯೋ ವೈರಲ್

ಪೊಲೀಸರ ವಿರುದ್ಧ ತಿರುಗಿ ಬಿದ್ದ ಆಫ್ರಿಕಾ ಪ್ರಜೆಗಳು | ಲಾಠಿ ರುಚಿ ತೋರಿಸಿದ ಪೊಲೀಸರು

200 ರೂಪಾಯಿ ಪೆಟ್ರೋಲ್ ಹಾಕಿಸಿ ಹಣ ನೀಡದೇ ಪರಾರಿಯಾದ ಬೈಕ್ ಸವಾರರು!

ಪೊಲೀಸರ ವಿರುದ್ಧ ತಿರುಗಿ ಬಿದ್ದ ಆಫ್ರಿಕಾ ಪ್ರಜೆಗಳು | ಲಾಠಿ ರುಚಿ ತೋರಿಸಿದ ಪೊಲೀಸರು

ಇತ್ತೀಚಿನ ಸುದ್ದಿ