ಪ್ರಜಾಪ್ರಭುತ್ವಕ್ಕೆ ಫೇಸ್‍ಬುಕ್ ಮಾರಕ: ರಾಹುಲ್ ಗಾಂಧಿ ಆರೋಪ
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಫೇಸ್‍ಬುಕ್ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಚುನಾವಣೆ ಸಮಯದಲ್ಲಿ ಮತದಾರರನ್ನು ತಲುಪಲು ಬಿಜೆಪಿಗೆ ಮೇಟಾ ಸಹಾಯ ಮಾಡಿದೆ. ಇದರಿಂದಾಗಿ ಪ್ರಜಾಪ್ರಭುತ್ವಕ್ಕೆ ಫೇಸ್‍ಬುಕ್ ಕೆಟ್ಟದ್ದು ಎಂದು ಆರೋಪಿಸಿದರು.
ರಾಹುಲ್ ಗಾಂಧಿ ಅವರು ಅಲ್ ಜಜೀರಾ ಮತ್ತು ದಿ ರಿಪೋರ್ಟರ್ಸ್ ಕಲೆಕ್ಟಿವ್‍ನ ವರದಿಯನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಫೇಸ್‍ಬುಕ್ ಬಿಜೆಪಿಗೆ ಚುನಾವಣಾ ಜಾಹೀರಾತುಗಳಿಗಾಗಿ ಕಡಿಮೆ ಬೆಲೆಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿಕೊಂಡಿದೆ.
ಇಂದು ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಅಲ್ಲದೆ, ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ದೇಶದಲ್ಲಿ ರಾಜಕೀಯ ಕಾರ್ಯಕ್ಕೆ ಬಳಸಲಾಗುತ್ತಿದೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉಕ್ರೇನ್ ನ ಮಾರಿಯುಪೋಲ್ ಆಸ್ಪತ್ರೆಯನ್ನು ವಶಕ್ಕೆ ಪಡೆದ ರಷ್ಯಾ ಸೇನೆ
ನಾಳೆ ಕರ್ನಾಟಕ ಬಂದ್ ಗೆ ಮುಸ್ಲಿಂ ಸಂಘಟನೆ ಕರೆ
ಫಾಲ್ಸ್ ನಲ್ಲಿ ಮುಳುಗಿ ಆರೆಸ್ಸೆಸ್ ಕಾರ್ಯಕರ್ತ ಸಾವು
ಹೋಳಿ ಹಬ್ಬದ ನಂತರ ಹಿಜಾಬ್ ಭವಿಷ್ಯ: ಸುಪ್ರೀಂ ಕೋರ್ಟ್
ಫೇಸ್ ಬುಕ್, ಟ್ವಿಟ್ಟರ್ ಸಾಮಾಜಿಕ ಜಾಲತಾಣಗಳ ಬಗ್ಗೆ ಸೋನಿಯಾ ಗಾಂಧಿ ಗಂಭೀರ ಆರೋಪ