ವಿಮಾನದಲ್ಲಿ ಏಕಾಏಕಿ ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿದ ಮಹಿಳೆ
ತಿರುವನಂತಪುರಂ: ದುಬೈನಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಏಕಾಏಕಿ ಪ್ರಜ್ಞಾಹೀನ ಸ್ಥಿತಿ ತಲುಪಿ ಸಾವನ್ನಪ್ಪಿದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.
ಮಿನಿ(56) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಇವರು ವಿಮಾನದ ಮೂಲಕ ದುಬೈನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಏಕಾಏಕಿ ಅವರು ಪ್ರಜ್ಞಾಹೀನರಾಗಿದ್ದಾರೆ. ವಿಮಾನ ಲ್ಯಾಂಡ್ ಆದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.
ಮೃತ ಮಹಿಳೆ ಈಗಾಗಲೇ ಹಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವಿಮಾನ ನಿಲ್ದಾಣದ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. ಈ ಬಗ್ಗೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka