ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ: ಮೌನ ಮುರಿದ ಹೆಚ್.ಡಿ.ಕುಮಾರಸ್ವಾಮಿ
![h d kumaraswamy](https://www.mahanayaka.in/wp-content/uploads/2024/04/h-d-kumaraswamy-1.jpg)
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದರು.
ನಾನಾಗಲಿ, ಹೆಚ್.ಡಿ ದೇವೇಗೌಡ ಅವರಾಗಲಿ ಈ ರೀತಿಯಲ್ಲಿ ಕೆಲಸ ಮಾಡಿಲ್ಲ, ಹೆಣ್ಣು ಮಕ್ಕಳ ವಿಚಾರದಲ್ಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳಿಸಿದ್ದೇವೆ, ಹಾಸನದ ಚುನಾವಣಾ ಪ್ರಚಾರದ ವೇಳೆ ಪ್ರಕರಣ ಆರಂಭವಾಗಿದ್ದು ವಾಸ್ತವಾಂಶ ಹೊರಬರಲಿ, ತನಿಖೆ ಆದ ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನೆಲದ ಕಾನೂನಿನಲ್ಲಿ ತಪ್ಪು ಮಾಡಿದವನು, ಉಪ್ಪು ತಿಂದವನು ನೀರು ಕುಡಿಯಲೇ ಬೇಕು, ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ, ಹೀಗಾಗಿ ತನಿಖೆಯ ವರದಿ ಬರಲಿ ಬಂದ ಮೇಲೆ ಮಾತನಾಡುತ್ತೇನೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ರೆ ನನಗೆ ಸಂಬಂಧವಿಲ್ಲ, SIT ತನಿಖೆಗೆ ಆದೇಶಿಸಿ ಅಧಿಕಾರಿಗಳನ್ನು ನೇಮಿಸಿದ್ದಾರೆ, ವಿದೇಶಕ್ಕೆ ಹೋಗಿದ್ರೆ ಕರ್ಕೊಂಡು ಬರೋ ಜವಾಬ್ದಾರಿ ಅವರದ್ದು ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth