ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಪ್ರಕಾಶ್ ರಾಜ್ ಆಂಬುಲೆನ್ಸ್ ಕೊಡುಗೆ ನೀಡಿದ್ದೇಕೆ?

ಇಡೀ ಕರ್ನಾಟಕವನ್ನೇ ಕಣ್ಣೀರಲ್ಲಿ ಮುಳುಗಿಸಿ ಹೊರಟು ಹೋದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ನೆನಪಿಗಾಗಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ‘ಅಪ್ಪು ಎಕ್ಸ್ ಪ್ರೆಸ್’ ಆಂಬುಲೆನ್ಸ್ ನ್ನು ಕೊಡುಗೆಯಾಗಿ ಮಿಷನ್ ಆಸ್ಪತ್ರೆಗೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪು ಕೇವಲ ಕರ್ನಾಟಕ ಮಾತ್ರವಲ್ಲ ವಿಶ್ವದಾದ್ಯಂತ ತನ್ನ ಸಜ್ಜನಿಕೆ, ಸಮಾಜಸೇವೆ, ಒಳ್ಳೆಯತನ ಮತ್ತು ಅಭಿನಯದಿಂದ ಹೆಸರು ಮಾಡಿದ್ದಾರೆ. ಎಲ್ಲರ ಮನದಲ್ಲೂ ಶಾಶ್ವತವಾಗಿ ನೆಲೆಸಿದ್ದಾರೆ. ಕರ್ನಾಟಕದಾದ್ಯಂತ ಅವರ ಅಭಿಮಾನಿ ಸಂಘಗಳು, ಅವರ ಪೋಸ್ಟರ್ ಗಳು, ಅವರ ಹೆಸರಿನ ರಸ್ತೆಗಳು ಅವರ ಹಿರಿಮೆ ಸಾರುತ್ತಿದೆ. ಅಪ್ಪು ನೆನಪಿಗೆ ಸಮಾಜಕ್ಕೆ ಏನಾದರೂ ಸೇವಾ ಕಾರ್ಯ ಮಾಡಬೇಕೆಂಬ ಉದ್ದೇಶದಿಂದ ಆಸ್ಪತ್ರೆಗೆ ಆಂಬುಲೆನ್ಸ್ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಪುನೀತ್ ಗೆ ತುರ್ತು ಚಿಕಿತ್ಸೆ ಸಿಕ್ಕಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು ಎಂಬುದು ನನ್ನ ನಂಬಿಕೆಯಾಗಿದೆ. ಈ ರೀತಿ ಬೇರೆಯವರಿಗೆ ಆಗಬಾರದು ಎಂದು ಭಾವಿಸಿ ತುರ್ತು ವಾಹನ ಪ್ರಕಾಶ್ ರಾಜ್ ಫೌಂಡೇಶನ್ ವತಿಯಿಂದ ನೀಡುತ್ತಿದ್ದೇವೆ ಎಂದು ಇದೇ ವೇಳೆ ಪ್ರಕಾಶ್ ರಾಜ್ ಅವರು ಹೇಳಿದ್ದಾರೆ.
ಪುನೀತ್ ರಾಜ್ ಕುಮಾರ್ ಸಾಕಷ್ಟು ಮಂದಿಗೆ ದಾನ ಮಾಡಿದ್ದಾರೆ. ಅವರ ಈ ಗುಣವನ್ನು ಪ್ರೋತ್ಸಾಹಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯವನ್ನು ಕೈಗೊಂಡಿರುವುದಾಗಿ ತಿಳಿಸಿದ ಅವರು, ರಾಜ್ಯ ಎಲ್ಲಾ ಜಿಲ್ಲೆಗಳಿಗೂ ಈ ರೀತಿ ತುರ್ತು ಸೇವೆ ವಾಹನವನ್ನು ನೀಡುಲಾಗುವುದು ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka