ಸಕಲ ಸರ್ಕಾರಿ ಗೌರವಗಳೊಂದಿಗೆ ನೇರವೇರಿದ ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಅವರ ಅಂತ್ಯಕ್ರಿಯೆ
ಐದು ಬಾರಿ ಮುಖ್ಯಮಂತ್ರಿಯಾದ ಪಂಜಾಬ್ ಮಾಜಿ ಸಿಎಂ ಮತ್ತು ಶಿರೋಮಣಿ ಅಕಾಲಿದಳದ ಪೋಷಕ ಪ್ರಕಾಶ್ ಸಿಂಗ್ ಬಾದಲ್ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೇರವೇರಿಸಲಾಯಿತು.
ನಿನ್ನೆ ರಾತ್ರಿ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಲಂಬಿಗೆ ತರಲಾಯಿತು. ಪಂಜಾಬ್ ಮುಖ್ಯಮಂತ್ರಿ ಅವರ ಗೌರವಾರ್ಥವಾಗಿ ಪಂಜಾಬ್ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿತು.
ಒಂದು ವಾರದ ಹಿಂದೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ನಂತರ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ನಿಧನರಾದರು.
ಸಾವಿರಾರು ಬೆಂಬಲಿಗರು, ಹಲವಾರು ರಾಜಕೀಯ ನಾಯಕರು, ಕುಟುಂಬ ಸದಸ್ಯರು ಬಾದಲ್ ಅವರ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡು, ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ಪ್ರಕಾಶ್ ಅವರ ಮಗ, ಎಸ್ ಎಡಿ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw